‘ನಮ ಮಾತೆರ್ಲ ಒಂಜೇ’ ಕಲಾತಂಡದ 20ನೇ ವರ್ಷದ ವಾರ್ಷಿಕೋತ್ಸವಕ್ಕೆ ಆಹ್ವಾನ

0
6

‘ನಮ ಮಾತೆರ್ಲ ಒಂಜೇ’ ಕಲಾತಂಡ ಅಳದಂಗಡಿ ಇದರ 20ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರನ್ನು ಭೇಟಿಯಾಗಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆತ್ಮೀಯವಾಗಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಕಲಾತಂಡದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. ಕಲಾತಂಡದ 20 ವರ್ಷಗಳ ಕಲಾ ಸೇವೆ ಮತ್ತು ಸಾಧನೆಯ ಸಂಭ್ರಮಕ್ಕೆ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.