ಕಾಸರಗೋಡು: ಮಕ್ಕಳ ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಮಕ್ಕಳ ಸಾಹಿತಿಗಳು,ಕವಿ, ಕವಯತ್ರಿಯರು, ಬರಹಗಾರರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಇದರ ಕೇರಳ ರಾಜ್ಯ ಘಟಕವಾಗಿ 2019 ರಲ್ಲಿ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕವು ರಚನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ, ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿ ಮತ್ತು ಕನ್ನಡಪರ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಂಡಿರುತ್ತದೆ.
ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ, ಕಾಸರಗೋಡು ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಇದರ ಸಹಯೋಗದಲ್ಲಿ ಕಾಸರಗೋಡು ಮೀಪುಗುರಿ -ಪಾರೆಕಟ್ಟೆ ರಸ್ತೆಯ ಕನ್ನಡ ಗ್ರಾಮದಲ್ಲಿ 2026 ನವಂಬರ್ 29 ಆದಿತ್ಯವಾರದಂದು ಬೆಳಿಗ್ಗೆ ಗಂಟೆ 10.00 ಕ್ಕೆ ಮಕ್ಕಳ ಶತಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.
ಕೇರಳ ಮತ್ತು ಕರ್ನಾಟಕ ರಾಜ್ಯದ ಮಕ್ಕಳ ಸಾಹಿತ್ಯ ಉತ್ಸವ- ಮಕ್ಕಳ ಕವಿ ಗೋಷ್ಠಿಯನ್ನು ಮಕ್ಕಳ ಸಾಹಿತಿಗಳು,ಕವಿ, ಕವಯತ್ರಿಯರು ಹಾಗೂ 1ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿ ಕವಿಗಳು, ಕಾಲೇಜು (ಪದವಿ ಪೂರ್ವ, ಪದವಿ ಸ್ನಾತಕೋತ್ತರ) ವಿದ್ಯಾರ್ಥಿ ಕವಿಗಳು ತಮ್ಮ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ವಾಟ್ಸ್ ಪ್ ಮೂಲಕ ಕಳುಹಿಸಬೇಕು. ಮಕ್ಕಳ ಕವನಗಳನ್ನು ವಾಚಿಸಲು ಅವಕಾಶ ನೀಡಲಾಗಿದೆ.
ಭಾಗವಹಿಸಿದ ಕವಿಗಳಿಗೆ ಪ್ರಮಾಣ ಪತ್ರ, ಸ್ಮರಣಿಕೆ ಸಾಹಿತ್ಯ ಕೃತಿಗಳ ಕಿಟ್ ನ್ನು ನೀಡಿ ಗೌರವಿಸಲಾಗುವುದು. ಶಿವರಾಮ ಕಾಸರಗೋಡು, ಅಧ್ಯಕ್ಷರು,ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ,ಕನ್ನಡ ಗ್ರಾಮ, ಕನ್ನಡ ಗ್ರಾಮ ರಸ್ತೆ, ಕಾಸರಗೋಡು-671121
ಮೊಬೈಲ್ :-9448572016 ಇವರನ್ನು ಸಂಪರ್ಕಿಸಬಹುದು.

