ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ನಡೆಯಲಿರುವ ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಸರ್ವಾಧ್ಯಕ್ಷರಾದ ಡಾ.ಭಾಸ್ಕರಾನಂದ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆಯೊಂದಿಗೆ ವೀಳ್ಯ ನೀಡಿ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದೇಶದ ಪ್ರಸಿದ್ಧ ವೈದ್ಯರಾದ ಡಾ.ಭಾಸ್ಕರಾನಂದ ಕುಮಾರ್ ಈ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿರುವುದು ನಮ್ಮೆಗೆಲ್ಲರಿಗೂ ಹೆಮ್ಮೆ. ವೈದ್ಯರಾಗಿ ಕಲಾವಿದರಾಗಿ ಮತ್ತು ಸಂಘಟಕರಾಗಿ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ಅತ್ಯಂತ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವೈದ್ಯ ದಂಪತಿಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸ್ಥಾಪಕ ಉಡುಪಿ ವಿಶ್ವನಾಥ ಶೆಣಿೈ, ಅಧ್ಯಕ್ಷ ಪ್ರೊ.ಶಂಕರ್, ಸುಹಾಸಂ ಅಧ್ಯಕ್ಷೆ ಸಂಧ್ಯಾ ಶೆಣಿೈ, ಶ್ರೀನಿವಾಸ ಉಪಾಧ್ಯ, ಕಲಾಪೋಷಕ ಭುವನ ಪ್ರಸಾದ ಹೆಗ್ಡೆ, ತುಳುಕೂಟದ ಕಾರ್ಯದರ್ಶಿ ಗಂಗಾಧರ ಕಿದಿಯೂರು,ಪ್ರಭಾಕರ್ ಭಂಡಾರಿ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಪದಾಧಿಕಾರಿಗಳಾದ ರಂಜನಿ ವಸಂತ್, ಸತೀಶ್ ಕೊಡವೂರು,ರಾಜೇಶ್ ಭಟ್ ಪಣಿಯಾಡಿ, ಅನಿತಾ ಸಿಕ್ವೇರಾ, ಆರ್ ವಸಂತ್, ಶಶಿಕಾಂತ್ ಶೆಟ್ಟಿ, ದೀಪಾ ಕರ್ಕಿ, ಚಂದ್ರಕಾಂತ್, ಸಿದ್ದ ಬಸಯ್ಯ ಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ ಪ್ರಸ್ತಾವನೆಗೈದು ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಜನಾದ೯ನ್ ಕೊಡವೂರು ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕವಾ೯ಲು ಧನ್ಯವಾದವಿತ್ತರು.

