Saturday, June 14, 2025
Homeಅಂತಾರಾಷ್ಟ್ರೀಯಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ದುರಂತ ಸಾವು

ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ದುರಂತ ಸಾವು

ಟೆಹ್ರಾನ್: ನಿನ್ನೆ ಪತನಗೊಂಡಿದ್ದ ಹೆಲಿಕಾಪ್ಟರ್ ನಲ್ಲಿದ್ದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಹಿತ ಎಲ್ಲರೂ ಮೃತಪಟ್ಟಿದ್ದಾರೆ ಎಂದು ವರದಿಗಳಾಗಿವೆ. ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್ ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ ಹಾಗೂ ಗನ್ ಮ್ಯಾನ್ ಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇರಾನ್ ನ ವಾಯುವ್ಯ ಪರ್ವತ ಪ್ರದೇಶದ ಜೋಲ್ಫಾದಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಪತನಗೊಂಡಿತ್ತು. ಹವಾಮಾನ ವೈಪರೀತ್ಯದಿಂದಾಗಿ ಭಾನುವಾರ ಸಂಜೆ ಹೆಲಿಕಾಪ್ಟರ್ ಪತನಗೊಂಡಿತ್ತು. ಹೆಲಿಕಾಪ್ಟರ್ ಹಾರಾಟದ 30 ನಿಮಿಷಗಳ ಬಳಿಕ ಸಂಪರ್ಕ ಕಡಿತವಾಗಿತ್ತು,

ಗಡಿಭಾಗದಲ್ಲಿ ಕ್ವಿಜ್ ಖಲಾಸಿ ಅಣೆಕಟ್ಟನ್ನು ಉದ್ಘಾಟಿಸಿ ಇರಾನಿನ ನಗರ ತಬ್ರಿಜ್ ಗೆ ಹಿಂದಿರುಗುವ ವೇಳೆ ಈ ದುರ್ಘಟನೆ ಸಂಭವಿಸಿದೆ.

RELATED ARTICLES
- Advertisment -
Google search engine

Most Popular