ಅಮೆರಿಕನ್ F-15 ವಿಮಾನ ಹೊಡೆದುರುಳಿಸಿದ ಇರಾನ್

0
81

ಟೆಹ್ರಾನ್: ಇರಾನ್ ಸೇನೆಯ ವಾಯು ರಕ್ಷಣಾ ವ್ಯವಸ್ಥೆಯಿಂದ ಮತ್ತೊಂದು ಅಮೆರಿಕನ್ F-15 ವಿಮಾನವನ್ನು ಹೊಡೆದುರುಳಿಸಲಾಗಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಉಲ್ಬಣಗೊಳ್ಳುತ್ತಿರುವ ನಡುವೆ, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಸೇನೆಯ ವಾಯು ರಕ್ಷಣಾ ವ್ಯವಸ್ಥೆಯಿಂದ ಬುಧವಾರ ಮತ್ತೊಂದು ಅಮೆರಿಕನ್ F-15 ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂದು ಟೆಹ್ರಾನ್ ಟೈಮ್ಸ್ ವರದಿ ಮಾಡಿದೆ.

ಇಸ್ಲಾಮಿಕ್ ರಿಪಬ್ಲಿಕ್ ನ್ಯೂಸ್ ಏಜೆನ್ಸಿ(IRNA) ಕುವೈತ್‌ನಲ್ಲಿ US F-15 ಫೈಟರ್ ಜೆಟ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಹೇಳಿಕೊಂಡಿದೆ. IRNA ಕುವೈತ್‌ನಲ್ಲಿ ಅಮೇರಿಕನ್ F-15 ಫೈಟರ್ ಜೆಟ್ ಅನ್ನು ಹೊಡೆದುರುಳಿಸಿರುವುದನ್ನು ತೋರಿಸುವ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಂಡಿದೆ. “ಸ್ಥಳೀಯ ಮೂಲಗಳ ಪ್ರಕಾರ, ಸೋಮವಾರ ಬೆಳಿಗ್ಗೆ ಕುವೈತ್‌ನ ಮೇಲಿನ ಆಕಾಶದಲ್ಲಿ US F-15 ಫೈಟರ್ ಜೆಟ್ ಅನ್ನು ಹೊಡೆದುರುಳಿಸಲಾಗಿದೆ” ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here