ಮೂಡುಬಿದಿರೆ: ಇರುವೈಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ಆ. 10ರಂದು ಭಾನುವಾರ ಇರುವೈಲು ಸರಕಾರಿ ಶಾಲೆಯಲ್ಲಿ ನಡೆಯಿತು. ರಕ್ತದಾನ ಶಿಬಿರದಲ್ಲಿ ಒಟ್ಟು 90 ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಆಚಾರ್ಯ, ಪಂಚಾಯತ್ ಸದಸ್ಯರುಗಳಾದ ನವೀನ್ ಪೂಜಾರಿ ಕಿಟ್ಟುಬೆಟ್ಟು, ನಾಗೇಶ್ ಅಮೀನ್ ಬಿಯಂದಕೋಡಿ, ಸಮಿತಿಯ ಪದಾಧಿಕಾರಿಗಳು , ಸದಸ್ಯರು ಹಾಗೂ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.