“ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ..” ಮಾಸ್ಕ್​ ಮೆನ್​ ಬಂಧನ ಬೆನ್ನಲ್ಲೇ ಡಾ. ಹೆಗ್ಗಡೆ ಏನಂದ್ರು?

0
114

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಅನಾಮಿಕ ನೀಡಿದ ದೂರಿನ ಮೇಲೆ ಎಸ್​​ಐಟಿ (SIT) ತನಿಖೆ ತೀವ್ರಗತಿಯಲ್ಲಿ ಸಾಗುತ್ತಿದೆ. ನಿನ್ನೆ ಇಡೀ ದಿನ ದೂರುದಾರ ಚಿನ್ನಯ್ಯನನ್ನು ಎಸ್​ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಈ ವೇಳೆ ಆತನ ಹೇಳಿಕೆಯಲ್ಲಿ ವ್ಯತ್ಯಾಸ ಕಂಡು ಬಂದಿದೆ. ಮತ್ತು ಈ ಆರೋಪಗಳು ಪಿತೂರಿಯಿಂದ ಮಾಡಲಾಗಿದೆ ಎಂದು ಎಸ್​ಐಟಿ ಅಧಿಕಾರಿಗಳು ಕಂಡುಕೊಂಡಿದ್ದು, ಇಂದು ಆತನನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ದೂರುದಾರ ಚಿನ್ನಯ್ಯನನ್ನು ಕಸ್ಟಡಿಗೆ ಪಡೆದುಕೊಂಡ ಬೆನ್ನಲ್ಲೇ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ. ದೂರುದಾರದ ಬಂಧನ ಮತ್ತು ಸುಜಾತಾ ಭಟ್​​ ಕೇಸ್​ ಬೆಳವಣಿಗೆ ನಂತರ ಇದೀಗ ಮೊದಲ ಸಾರ್ವಜನಿಕ ಹೇಳಿಕೆಯನ್ನು ನೀಡಿದ್ದಾರೆ.

ವೀರೇಂದ್ರ ಹೆಗ್ಗಡೆ ಹೇಳಿದ್ದೇನು?

ಧರ್ಮಸ್ಥಳದಲ್ಲಿ ಸಾಮೂಹಿಕ ಶವ ದಫನ ಆರೋಪದಿಂದ ಉಂಟಾದ ವಿವಾದದ ನಡುವೆ, ಮತ್ತು ಮಾಸ್ಕ್​ ಮ್ಯಾನ್​ ಬಂಧನದ ಬೆಳವಣಿಗೆಗಳ ಮಧ್ಯೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಮೊದಲ ಸಾರ್ವಜನಿಕ ಹೇಳಿಕೆಯನ್ನು ನೀಡಿದ್ದಾರೆ. “ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ. ಕ್ಷೇತ್ರದ ಮೇಲಿನ ಅಭಿಮಾನ ಹೀಗೇ ಇರಲಿ,” ಎಂದು ಅವರು ತಿಳಿಸಿದ್ದಾರೆ. ಈ ಹೇಳಿಕೆಯ ಮೂಲಕ, ವಿಶೇಷ ತನಿಖಾ ದಳದ (SIT) ತನಿಖೆಯಲ್ಲಿ ಆರೋಪಗಳ ದುರುದ್ದೇಶಪೂರಿತ ಸ್ವರೂಪ ಬಯಲಾಗುತ್ತಿದೆ ಎಂದು ಸೂಚಿಸಿದ್ದಾರೆ.

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆ ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದಿದ್ದಾರೆ. ಅಲ್ಲದೇ ತನಿಖೆಯ ಹಂತದಲ್ಲಿ ಹೆಚ್ಚಿನದನ್ನು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here