ಮಂಗಳೂರು ಅಭಿವೃದ್ಧಿಗೆ ಒಳಚರಂಡಿ, ಕುಡಿಯುವ ನೀರಿಗೆ ₹500 ಕೋಟಿ ಬಿಡುಗಡೆಗೆ ಐವನ್ ಡಿʼಸೋಜಾ ಆಗ್ರಹ

0
9

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮತ್ತು ಹಿಂದೆ ನೀಡಿದ ಬೇಡಿಕೆಯಂತೆ ಮಹಾನಗರ ಪಾಲಿಕೆ ಒಳಚರಂಡಿ ಯೋಜನೆ 1200ಕೋಟಿ ಪೂರಕವಾಗಿ ಪ್ರಥಮ ಹಂತದಲ್ಲಿ 350 ಕೋಟಿ ಬಿಡುಗಡೆ  ಮಾಡಲು ಮುಖ್ಯಮಂತ್ರಿಯವರು ಸಚಿವ ಸಂಪುಟದ ಸಚಿವರೊಂದಿಗೆ ಘೋಷಣೆ ಯಾಗಿರುವುದು ಒಪ್ಪಿರುವುದಾಗಿ ಐವನ್‌ ಡಿʼಸೋಜಾ ತಿಳಿಸಿದರು.

ಮಂಗಳೂರು ನಗರದ ಒಳಚರಂಡಿ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಈ ಯೋಜನೆಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಪ್ರಥಮ ಹಂತದ ಕಾಮಗಾರಿಗಳಿಗೆ ಅಗತ್ಯವಿರುವ ರೂ.350 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಈ ಹಿಂದೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.

ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಮತ್ತೊಮ್ಮೆ ಸರ್ಕಾರದ ಗಮನ ಸೆಳೆಯಲಾಗಿದ್ದು, ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ. ರೂ.1,200 ಕೋಟಿ ಮೊತ್ತದ ಸಮಗ್ರ ಒಳಚರಂಡಿ ಯೋಜನೆಗೆ ಪ್ರಥಮ ಹಂತದಲ್ಲಿ ರೂ.350 ಕೋಟಿ ಬಿಡುಗಡೆ ಮಾಡುವ ಕುರಿತು ಘೋಷಣೆ ಮಾಡಿರುವುದು ಸ್ವಾಗತಾರ್ಹವಾಗಿದ್ದು, ಇದರಿಂದ ಮಂಗಳೂರು ನಗರದ ಒಳಚರಂಡಿ ವ್ಯವಸ್ಥೆಯ ಅಭಿವೃದ್ಧಿಗೆ ವೇಗ ದೊರೆಯಲಿದೆ ಎಂದು ಐವನ್ ಡಿʼಸೋಜಾ ತಿಳಿಸಿದ್ದಾರೆ.

ಮಂಗಳೂರು ನಗರದ ನಾಗರಿಕರಿಗೆ ಉತ್ತಮ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.