ಉಡುಪಿ: ಅಲೆವೂರು ಯುವಕ ಸಂಘ (ರಿ) ಹಾಗೂ ಮಹಿಳಾ ಸಂಘ ಶ್ರೀ ರಾಮಪುರ ಅಲೆವೂರು ಆಶ್ರಯದಲ್ಲಿ 44ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯ ನಾರಾಯಣ ಪೂಜೆ ಜನವರಿ 11ರಂದು ಜರುಗಲಿದೆ.
ಅಂದು ಬೆಳಗ್ಗೆ 9.30ರಿಂದ ಸಾರ್ವಜನಿಕ ಶ್ರೀ ಸತ್ಯ ನಾರಾಯಣ ಪೂಜೆ ಹಾಗೂ ಮಧ್ಯಾಹ್ನ ಸಾರ್ವಜನಿಕ ಮಹಾ ಅನ್ನಸಂರ್ಪಣೆ ನಡೆಯಲಿದೆ. ರಾತ್ರಿ 7.30ರಿಂದ ಸಭಾ ಕಾರ್ಯಕ್ರಮ ಹಾಗೂ ಸುಭೋದಿನಿ ಹಿರಿಯ ಪ್ರಾರ್ಥಮಿಕ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ರಾತ್ರಿ 9.30ರಿಂದ ಚೈತನ್ಯ ಕಲಾವಿದರು ಬೈಲೂರು ಇವರಿಂದ ಅಷ್ಟೆಮಿ ಎಂಬ ತುಳು ನಾಟಕ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.