ಮುಲ್ಕಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಜಾಕ್ಸನ್ ಸಲ್ದಾನ ರವರು ಆಯ್ಕೆಯಾಗಿದ್ದಾರೆ.
ತಿಂಗಳ ಹಿಂದೆ ಅನ್ನ್ಲೈನ್ ಮೂಲಕ ರಾಜ್ಯದಾದ್ಯಂತ ಯುವ ಕಾಂಗ್ರೆಸ್ ನ ಚುನಾವಣೆ ನಡೆದಿದ್ದು ಮುಲ್ಕಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಜಾಕ್ಸನ್ ಸಲ್ದಾನ ಸ್ಪರ್ಧಿಸಿದ್ದು ನೂತನ ಅಧ್ಯಕ್ಷರಾಗಿ ಅವರು ಆಯ್ಕೆಯಾಗಿದ್ದಾರೆ.
ಜಾಕ್ಸನ್ ರವರು ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಮುಲ್ಕಿ ತಾಲೂಕಿನ ಕೆಮ್ರಾಲ್ ಗ್ರಾಮ ಪಂಚಾಯತ್ ನ ಸದಸ್ಯರಾಗಿದ್ದು, ಪಕ್ಷಿಕೆರೆಯ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ
ಕ್ಷೇತ್ರದ ನೂತನ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಜಾಕ್ಸನ್ ಸಲ್ದಾನ ರವರನ್ನು ಮಾಜೀ ಸಚಿವ ಕೆ. ಅಭಯ ಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬರ್ನಾಡ್,ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್,
ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ, ಮುಲ್ಕಿ ನಗರ ಪಂಚಾಯತ್ ಸದಸ್ಯರಾದ ಪುತ್ತು ಬಾವ ,ಯೋಗೀಶ್ ಕೋಟ್ಯಾನ್, ಮಂಜುನಾಥ ಕಂಬಾರ, ಬಾಲಚಂದ್ರ ಕಾಮತ್,ಲೋಕೇಶ್ ಕೋಟ್ಯಾನ್,ಭೀಮಾ ಶಂಕರ್ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ