50 ದಿನಗಳನ್ನು ಪೂರೈಸಿದ ಜೈ ಸಿನಿಮಾ ಜನವರಿ 11 ರಂದು ಪೂನಾದಲ್ಲಿ ಪ್ರದರ್ಶನ

0
81

ಮಂಗಳೂರು : ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಮತ್ತು ಕನ್ನಡ ಭಾಷೆಯಲ್ಲಿ ಅತ್ಯಧಿಕ ಪ್ರದರ್ಶನ ಕಂಡಿದೆ. ಪ್ರಥಮ ದಿನವೇ 1020 ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿದ್ದು ಅಲ್ಲದೆ 50 ದಿನಗಳನ್ನು ಪೂರೈಸಿದೆ. ಜೈ ಸಿನಿಮಾ ಜನವರಿ 11 ರಂದು ಪೂನಾದಲ್ಲಿ ಪ್ರದರ್ಶನಗೊಳ್ಳಲಿದೆ. ಮುಂಬೈಯಲ್ಲಿ ಇತಿಹಾಸದಲ್ಲೇ ಅತೀ ದೊಡ್ಡ ತುಳು ಪ್ರೀಮಿಯರ್ ಒಂದೇ ದಿನ 9 ಟಾಕೀಸ್ ಗಳಲ್ಲಿ 25 ಕ್ಕೂ ಹೆಚ್ಚು ಶೋ ನಡೆದು ದಾಖಲೆ ಬರೆದಿದೆ .

ಈಗಾಗಲೇ ಸಿನಿಮಾ ತೆರೆಕಂಡ ಎಲ್ಲಾ ಕಡೆ ಅದ್ಬುತ ಪ್ರದರ್ಶನ ಕಂಡು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಮಂಗಳೂರಿನಲ್ಲಿ ಸತತ ಎಂಟು ವಾರಗಳ ಪ್ರದರ್ಶನದಲ್ಲಿ ಉತ್ತಮ ಮೊತ್ತವನ್ನು ಕಲೆ ಹಾಕಿದೆ.
ಸಿನಿಮಾದ ಡಬ್ಬಿಂಗ್ ರೈಟ್ಸ್ ಆಡಿಯೋ ರೈಟ್ಸ್ ಮತ್ತು ಪ್ರೀಮಿಯರ್ ಶೋ ಸೇರಿ ದೊಡ್ಡ ಮಟ್ಟದಲ್ಲಿ ಚಿತ್ರ ತಂಡಕ್ಕೆ ಹಣ ಸಂಗ್ರಹವಾಗಿದೆ. ಸಿನಿಮಾವನ್ನು ಜನರು ನೋಡಿ ಮೆಚ್ಚಿಕೊಂಡಿದ್ದಾರೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಮನೆಮಂದಿ ಎಲ್ಲಾ ಇಷ್ಟ ಪಡುವುದರ ಜೊತೆಗೆ ಶಾಲಾ ಮಕ್ಕಳು ಕೂಡಾ ಸಿನಿಮಾ ನೋಡಿ ಮೆಚ್ಚಿದ್ದಾರೆ ಎಂದು ನಟ ನಿರ್ದೇಶಕ ರೂಪೇಶ್ ಶೆಟ್ಟಿ ತಿಳಿಸಿದ್ದಾರೆ.

“ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಜಿಲ್ಲೆಯ ಖ್ಯಾತನಾಮ ಕಲಾವಿದರು ಅಭಿನಯಿಸಿದ್ದಾರೆ. ಗಿರಿಗಿಟ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಜೈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಕೂಡಾ ಪಾತ್ರ ನಿರ್ವಹಿಸಿದ್ದು ಅದು ಹೆಚ್ಚಿನ ಪರಿಣಾಮ ಬೀರಿದೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣ ಆಗಿದೆ.

ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಚಿತ್ರಕತೆ ರೂಪೇಶ್ ಶೆಟ್ಟಿ ಮತ್ತು ವೇಣು ಹಸ್ರಳ್ಳಿ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್.

“‘ಜೈ ಸಿನಿಮಾದಲ್ಲಿ ಸುನೀಲ್ ಶೆಟ್ಟಿ, ಡಾ ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಜ್ಯೋತಿಷ್ ಶೆಟ್ಟಿ, ಮನೋಜ್ ಚೇತನ್ ಡಿ ಸೋಜ ಇನ್ನಿತರರು ಅಭಿನಯಿಸಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸಿದ್ದಾರೆ.

LEAVE A REPLY

Please enter your comment!
Please enter your name here