ವೇಣೂರು: ಭಾರತೀಯ ಜೈನ್ ಮಿಲನ್ ವೇಣೂರು ಘಟಕದ ಸಭೆಯು ವೇಣೂರು ಯಾತ್ರಿ ನಿವಾಸದಲ್ಲಿ ಜರಗಿತು. ಭಾರತೀಯ ಜೈನ್ ಮಿಲನ್ ಅಧ್ಯಕ್ಷ ಸುಕುಮಾರ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಕ್ಸೆಲ್ ಪ.ಪೂ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಭಾರತೀಯ ಜೈನ್ ಮಿಲನ್ ವಲಯ 8ರ ನಿರ್ದೇಶಕ ಪ್ರಮೋದ್ ಕುಮಾರ್ ಬಿ., ಜೈನ್ ಮಿಲನ್ ಕಾರ್ಯದರ್ಶಿ ಬಿ. ನಿರ್ಮಲ್ ಕುಮಾರ್ ಬೊಲ್ಮಾಲ್ ಉಪಸ್ಥಿತರಿದ್ದರು.
ಸನ್ಮಾನ
ಈ ಸಂದರ್ಭ ಶಿಕ್ಷಣ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿ ಅರ್ಹವಾಗಿ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿಯಿಂದ ಪುರಸ್ಕೃತಗೊಂಡಿರುವ ಗುರುವಾಯನಕೆರೆ ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌ರವರನ್ನು ಅಭಿನಂದಿಸಿ ಗೌರವಿಸಲಾಯಿತು.
ಪ್ರತಿಭಾ ಪುರಸ್ಕಾರ
ಈ ಸಂದರ್ಭ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಂಕಗಳನ್ನು ಪಡೆದು ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಸರ್ವಾರ್ಥ್ ಎಸ್. ಜೈನ್ ಸೇರಿದಂತೆ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜರುಗಿತು.
ಈ ಸಂದರ್ಭ ಅರಿಹಂತ ವಿಷನ್ ಇನ್ ಟ್ರಾಕ್ಸ್ ವಿ.ಎಸ್. ಜಯರಾಜ್, ನಮನ ಕ್ಲಿನಿಕ್‌ನ ವೈದ್ಯರಾದ ಡಾ| ಶಾಂತಿಪ್ರಸಾದ್, ಪಾರ್ಶ್ವನಾಥ್ ಪ್ರಿಂಟರ್ಸ್‌ನ ಸುದತ್ ಜೈನ್, ಅರುಣ್ ಕುಮಾರ್ ಐಂದಲ್ಕೆ, ಬಿ.ವಿ. ಸುನೀಲ್ ಕುಮಾರ್ ಮುದ್ದಾಡಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.