‘ಸೌಹಾರ್ದತೆಯಿಂದ ಸಮಾಜದ ಪ್ರಗತಿ’ ಪರಸ್ಪರ ಸೌಹಾರ್ದತೆಯಿಂದ ಧಾರ್ಮಿಕ ಆಚರಣೆಗಳನ್ನು ಆಚರಿಸಿಕೊಂಡಾಗ ದೇವರ ಪ್ರೀತಿ ಲಭಿಸುವುದರ ಜೊತೆಗೆ ಸಾಮಾಜಿಕ ಬೆಳವಣಿಗೆಯೂ ಸಾಧ್ಯವಾಗುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಹೇಳಿದ್ದಾರೆ.
ಇಲ್ಲಿನ ಜಕ್ರಿಬೆಟ್ಟುವಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ಗುರುವಾರ ನಡೆದ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿ ಕ ಸಭೆಯಲ್ಲಿ ಅವರು ಮಾತನಾಡಿದರು.
ಸಮಿತಿ ಗೌರವಾಧ್ಯಕ್ಷ ಮಾಜಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಲೊರೆಟ್ಟೋ ಮಾತಾ ಚಚರ್ಿನ ಧರ್ಮಗುರು ಜೇಮ್ಸ್ ಡಿಸೋಜ ಆಶೀರ್ವಚನ ನೀಡಿದರು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಶುಭ ಹಾರೈಸಿದರು. ಉದ್ಯಮಿ ಬಿ.ರಘುನಾಥ ಸೋಮಯಾಜಿ, ಎನ್.ಪ್ರಕಾಶ್ ಕಾರಂತ್, ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್, ಉಪಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಕಡೇಶಿವಾಲಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ವಕೀಲ ವೆಂಕಪ್ಪ ಗೌಡ ಸುಳ್ಯ ಮತ್ತಿತರರು ಇದ್ದರು.
ಸಮಿತಿ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು ಸ್ವಾಗತಿಸಿ, ಉಪಾಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ವಂದಿಸಿದರು. ಸತೀಶ ಹೊಸ್ಮಾರ್ ಕಾರ್ಯಕ್ರಮ ನಿರೂಪಿಸಿದರು.
