Saturday, July 20, 2024
Homeಕಾಪುಕಾಪು ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಂದಾಯ ಇಲಾಖೆ ಹಾಗೂ ತಹಸೀಲ್ದಾರರ ಕಚೇರಿ ಕಾಪು ವತಿಯಿಂದ ಜುಲೈ 11 ರಂದು ಕಾಪು ತಾಲೂಕು ಆಡಳಿತ ಸೌಧದಲ್ಲಿ ಆಯೋಜಿಸಲಾದ “ಜನಸ್ಪಂದನ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಮೀನುಗಾರಿಕಾ ಇಲಾಖೆಯ ಎಸ್.ಇ.ಪಿ ಟಿ.ಎಸ್ ಪಿ ಯೋಜನೆಯಡಿ ಮಂಜೂರಾದ ಮೀನು ಶೇಖರಣ ಪೆಟ್ಟಿಗೆ ಹಾಗೂ ಲೈಫ್ ಜಾಕೆಟ್ ಅನ್ನು 3 ಫಲಾನುಭವಿಗಳಿಗೆ ಪಶುಸಂಗೋಪನೆ ಇಲಾಖೆಯಿಂದ ಮಂಜೂರಾದ ಜಾನುವಾರುಗಳಿಗೆ ನೆಲ ಹಾಸು 17 ಫಲಾನುಭವಿಗಳಿಗೆ ಹಾಗೂ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು.

ಕಾಪು ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು 60 ಅಹವಾಲುಗಳನ್ನು ಸ್ವೀಕರಿಸಿ ಕ್ರಮವಹಿಸುವ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಸಹಾಯಕ ಆಯುಕ್ತರಾದ ರಶ್ಮಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗಣಪತಿ, ಹೈಚ್ಚುವರಿ ಪೋಲಿಸ್ ಅಧೀಕ್ಷಕರಾದ ಸಿದ್ಧಲಿಂಗಪ್ಪ, ಉಡುಪಿ ಜಿಲ್ಲಾ ಭೂಮಾಪನಾಧಿಗಳಾದ ರವೀಂದ್ರ, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ ಹಾಗೂ ಕಾಪು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular