Monday, December 2, 2024
Homeಕಾರ್ಕಳಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಪರ್ಧೆಯಲ್ಲಿ...

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ: ಶಿಕ್ಷಕಿ ಪವಿತ್ರರವರಿಗೆ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ತೃತೀಯ ಪ್ರಶಸ್ತಿ

ಭಾರತ್ ಸ್ಕೌಟ್ ಮತ್ತು ಗೈಡ್ಸ್, ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಜೀಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಬನ್ನಿಸ್ ತಂಡದ ಮಕ್ಕಳು ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕಯಾಗಿದ್ದಾರೆ. ಬುಲ್ ಬುಲ್ ತಂಡದ ಮಕ್ಕಳು ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ಇವರನ್ನು ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಯವರು, ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪವಿತ್ರರವರಿಗೆ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ತೃತೀಯ ಪ್ರಶಸ್ತಿ.
ಭಾರತ್ ಸ್ಕೌಟ್ ಮತ್ತು ಗೈಡ್ಸ್, ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ಗೀತ ಗಾಯನ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಶ್ರೀಮತಿ ಪವಿತ್ರ ರವರು ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರಾದ ಜೆಸಿ ಚಿತ್ತರಂಜನ್ ಶೆಟ್ಟಿಯವರು, ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕರಿಂದ ಅವರ ಅಭಿನಂದಿಸಿದರು.

RELATED ARTICLES
- Advertisment -
Google search engine

Most Popular