ಪರ್ಕಳ : JCI ಪರ್ಕಳ ವತಿಯಿಂದ 77ನೇ ಗಣರಾಜ್ಯೋತ್ಸವವನ್ನು ಶ್ರೀ ವಿಘ್ನೇಶ್ವರ ಸಭಾಭವನ, ಪರ್ಕಳದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಧ್ವಜಾರೋಹಣವನ್ನು ಮುಖ್ಯ ಅತಿಥಿಗಳಾದ ವಿಜಯಕುಮಾರ್ ಶೆಟ್ಟಿ ಅವರು ನೆರವೇರಿಸಿದರು.
ನಂತರ ಮುಖ್ಯ ಅತಿಥಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಗಣರಾಜ್ಯೋತ್ಸವದ ಮಹತ್ವ, ಸಂವಿಧಾನದ ಮೌಲ್ಯಗಳು ಹಾಗೂ ಯುವಜನರ ಪಾತ್ರದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ JCI Zone–15 ರ ವಲಯಾಧಿಕಾರಿ JFA ಸ್ವರಾಜ್ ಶೆಟ್ಟಿ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು JCI ಪರ್ಕಳದ ಅಧ್ಯಕ್ಷರಾದ Jc HGF ಭರತ್ ಕೆ ಕುಲಾಲ್ ಅವರು ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷರಾದ JFM ರಮ್ಯಾ ಆರ್ ನಾಯಕ್, ಘಟಕದ ಸದಸ್ಯರು ಹಾಗೂ ಪೂರ್ವಾಧ್ಯಕ್ಷರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂತ್ಯದಲ್ಲಿ ಎಲ್ಲರಿಗೂ ಸಿಹಿ ತಿಂಡಿ ವಿತರಣೆ ಮಾಡಲಾಗಿದ್ದು, ಕಾರ್ಯದರ್ಶಿ Jc ನಿತೀಶ್ ನಾಯ್ಕ್ ಅವರು ಧನ್ಯವಾದಗಳನ್ನು ಸಮರ್ಪಿಸಿದರು.

