ಸುಳ್ಯ: ಜೀಪು ಮತ್ತು ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ. ಅಜ್ಜಾವರದಲ್ಲಿ ಈ ಘಟನೆ ನಡೆದಿದೆ. ಅಜ್ಜಾವರ ಪಡ್ಡಂಬೈಲ್ ಕೆಎಫ್ ಡಿಸಿ ಉದ್ಯೋಗಿ ವಿನಾಯಕ ಮೂರ್ತಿ ಸಾವನ್ನಪ್ಪಿರುವವರು. ಮೂರ್ತಿ ಮತ್ತು ಅವರ ಪತ್ನಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಆಂಬುಲೆನ್ಸ್ ನಲ್ಲಿ ಗಾಯಗೊಂಡಿದ್ದ ಮೂರ್ತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಪತ್ನಿ ಮಂಜುಳಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮೃತರು ಒಬ್ಬ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.