ಪುತ್ತೂರು: ಜೀಪು ಬೈಕಿಗೆ ಡಿಕ್ಕಿಯಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಬೈಕಿನಲ್ಲಿದ್ದ ಮೃತರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬಡಕೋಡಿ ಕಡ್ಯ ನಿವಾಸಿ, ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ 48ರ ಹರೆಯದ ಲೋಕೇಶ್ ಮೃತಪಟ್ಟವರು. ಘಟನೆಯಲ್ಲಿ ಇವರ ಮಕ್ಕಳು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಪುತ್ತೂರು ಸಂಚಾರಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.