ಬಂಟ್ವಾಳ: ಇಲ್ಲಿನ ಪೂಂಜಾಲಕಟ್ಟೆಯಲ್ಲಿ ದ್ವಿಚಕ್ರ ವಾಹನ ಮತ್ತು ಜೀಪು ನಡುವೆ ಅಪಘಾತ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಗಾಯಗೊಂಡಿದ್ದಾರೆ. ಸೋಣಂದೂರು ನಿವಾಸಿ ಮಹಮ್ಮದ್ ಅರ್ಫಾಸ್ ಘಟನೆಯಲ್ಲಿ ಗಾಯಗೊಂಡಿರುವ ವ್ಯಕ್ತಿ. ಗಾಗೊಂಡಿರುವ ಅರ್ಫಾಸ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೀಪ್ ಚಾಲಕ ಅಜಾಗರೂಕತೆಯಿಂದ ಒಮ್ಮೆಲೆ ಬಂಟ್ವಾಳ ಕಡೆಗೆ ತಿರುಗಿಸಿದ್ದಾನೆ. ಇದೇ ವೇಳೆ ಬಿ.ಸಿ. ರೋಡಿನಿಂದ ಬರುತ್ತಿದ್ದ ಸ್ಕೂಟರ್ ಗೆ ಜೀಪ್ ಡಿಕ್ಕಿಯಾಗಿದೆ. ತಕ್ಷಣ ಸ್ಥಳೀಯರು ಗಾಯಾಳುವನ್ನು ಪೂಂಜಾಲಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೂಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.