ಮೂಡುಶೆಡ್ಡೆ : ಜಲ ಜೀವನ್ ಮಿಷನ್ ಅಡಿಯಲ್ಲಿ ಮಂಗಳೂರು ತಾಲ್ಲೂಕಿನ ಮೂಡುಶೆಡ್ಡೆ ಗ್ರಾಮ ಪಂಚಾಯತಿಯ ಮೂಡುಶೆಡ್ಡೆ ಗ್ರಾಮವನ್ನು ಮಂಗಳವಾರದಂದು ಹರ್ ಘರ್ ಜಲ್ ಗ್ರಾಮವೆಂದು ಘೋಷಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪವಿಭಾಗ ಮಂಗಳೂರು ಇವರ ಮಾರ್ಗದರ್ಶನದಲ್ಲಿ ಮೂಡುಶೆಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಅನಿಲ್ ಕುಮಾರ ಹಾಗೂ ಉಪಾಧ್ಯಕ್ಷೆ ಬಬಿತಾ ಶೆಟ್ಟಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ ಇವರ ನೇತೃತ್ವದಲ್ಲಿ ಹರ್ ಘರ್ ಜಲ್ ಗ್ರಾಮ ಎಂದು ಘೋಷಣೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಜಯಶ್ರೀ, ಹರಿಪ್ರಸಾದ ಶೆಟ್ಟಿ, ನಳಿನಿ, ಚಂದ್ರಿಕಾ, ವಿಜಯಲಕ್ಷ್ಮಿ, ಶಶಿಕಲಾ, ಶಾರದಾ, ಸುಕೇಶ್, ಚಂದ್ರಶೇಖರ್ ಹಾಗೂ ಗ್ರಾಮ ನೀರು ನೈರ್ಮಲ್ಯ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ನಾಗರೀಕರು ಉಪಸ್ಥಿತರಿದ್ದರು. ದ.ಕ. ಜಿ.ಪಂ ನ ISA ಹೆಚ್,ಆರ್.ಡಿ ಸಂಯೋಜಕರಾದ ಫಲಹಾರೇಶ ಮಣ್ಣೂರಮಠ ಕಾರ್ಯಕ್ರಮ ಆಯೋಜಿಸಿದ್ದರು.