ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗವಕಾಶ

0
76

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ದೊರೆತಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯ ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ (RAC) 2026ನೇ ಸಾಲಿನ ವಿಜ್ಞಾನಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 33 ವಿಜ್ಞಾನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ?

DRDO RAC ಪ್ರಕಟಿಸಿರುವ ಅಧಿಸೂಚನೆಯ ಪ್ರಕಾರ, Scientist C, Scientist D ಮತ್ತು Scientist E ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಒಟ್ಟು 33 ಹುದ್ದೆಗಳಲ್ಲಿ 20 Scientist-C, 11 Scientist-D ಮತ್ತು 2 Scientist-E ಹುದ್ದೆಗಳು ಸೇರಿವೆ. ಈ ಹುದ್ದೆಗಳು ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮೆಕ್ಯಾನಿಕಲ್, ಏರೋಸ್ಪೇಸ್, ಕೆಮಿಕಲ್ ಇಂಜಿನಿಯರಿಂಗ್ ಹಾಗೂ ಇತರೆ ತಾಂತ್ರಿಕ ವಿಭಾಗಗಳಿಗೆ ಸಂಬಂಧಿಸಿವೆ.

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ BE/B.Tech ಅಥವಾ ಪ್ರಥಮ ದರ್ಜೆಯ M.Sc. ಪದವಿ ಪಡೆದಿರಬೇಕು. ಜೊತೆಗೆ ಕನಿಷ್ಠ 60 ಪ್ರತಿಶತ ಅಂಕಗಳು ಅಥವಾ ಸಮಾನ ಸಿಜಿಪಿಎ ಹೊಂದಿರಬೇಕು.

ಈ ಹುದ್ದೆಗಳಿಗೆ ಅನುಭವವೂ ಕಡ್ಡಾಯವಾಗಿದೆ. Scientist-C ಹುದ್ದೆಗೆ ಕನಿಷ್ಠ 3 ವರ್ಷ, Scientist-D ಹುದ್ದೆಗೆ 7 ವರ್ಷ ಮತ್ತು Scientist-E ಹುದ್ದೆಗೆ 11 ವರ್ಷಗಳ ವೃತ್ತಿಪರ ಅನುಭವ ಅಗತ್ಯವಿದೆ. ಅನುಭವವು ಸಂಬಂಧಿತ ಕ್ಷೇತ್ರದಲ್ಲಿ ಪಡೆದಿರಬೇಕು.

ವಯೋಮಿತಿ ಎಷ್ಟು?

Scientist-C ಹುದ್ದೆಗೆ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. Scientist-D ಮತ್ತು Scientist-E ಹುದ್ದೆಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ಇದೆ. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಲಭ್ಯವಿದೆ.

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯುಎಸ್ ವರ್ಗದ ಪುರುಷ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಮಹಿಳಾ ಅಭ್ಯರ್ಥಿಗಳು, ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅಭ್ಯರ್ಥಿಗಳ ಅರ್ಜಿಗಳನ್ನು ಮೊದಲು ಪರಿಶೀಲಿಸಲಾಗುತ್ತದೆ. ನಂತರ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ, ಅನುಭವ ಮತ್ತು ಸಂದರ್ಶನದಲ್ಲಿನ ಪ್ರದರ್ಶನದ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು DRDO RACನ ಅಧಿಕೃತ ವೆಬ್‌ಸೈಟ್ rac.gov.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿಯನ್ನು ಅಂತಿಮವಾಗಿ ಸಲ್ಲಿಸಬಹುದು.

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, 2026ರ ಜೂನ್ 19 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ಕ್ಷಣದವರೆಗೆ ಕಾಯದೆ ಶೀಘ್ರವೇ ಅರ್ಜಿ ಸಲ್ಲಿಸುವುದು ಒಳಿತು.

LEAVE A REPLY

Please enter your comment!
Please enter your name here