ಅರಣ್ಯ ಇಲಾಖೆಯಲ್ಲಿ ಉದ್ಯೋಗವಕಾಶ; PRO ಹುದ್ದೆಗೆ ಅರ್ಜಿ ಆಹ್ವಾನ

0
17

ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆ ವತಿಯಿಂದ ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆ ನೇಮಕಾತಿಗೆ ಸಂಬಂಧಿಸಿದ ಮಹತ್ವದ ಅಧಿಸೂಚನೆ ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅರಣ್ಯ ಭವನ ಕೇಂದ್ರ ಕಚೇರಿಯಿಂದ ಈ ಪ್ರಕಟಣೆ ಹೊರಡಿಸಲಾಗಿದ್ದು, ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ (KFWCCF) ಅಡಿಯಲ್ಲಿ ಒಪ್ಪಂದ ಆಧಾರಿತವಾಗಿ ಎರಡು ವರ್ಷಗಳ ಪ್ರಾಥಮಿಕ ಅವಧಿಗೆ ಈ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ.

ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಅನುಭವ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಹ ಮತ್ತು ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ http://kfwccf.in ಮೂಲಕ ಡೌನ್‌ಲೋಡ್ ಮಾಡಿ ಭರ್ತಿ ಸಲ್ಲಿಸಬಹುದು.

ಅರ್ಜಿಯನ್ನು ಫೆಬ್ರವರಿ 25ರೊಳಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ನೇಮಕಾತಿ ಪ್ರಕ್ರಿಯೆ, ಅರ್ಜಿ ವಿಧಾನ ಹಾಗೂ ಸೇವಾ ನಿಯಮಗಳ ಕುರಿತ ಹೆಚ್ಚಿನ ವಿವರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅರಣ್ಯ ಮತ್ತು ಪರಿಸರ ಸಂರಕ್ಷಣಾ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರಿಗೆ ಇದು ಮಹತ್ವದ ವೃತ್ತಿ ಅವಕಾಶವಾಗಿದೆ.

LEAVE A REPLY

Please enter your comment!
Please enter your name here