ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರು ಎಚ್ಚರಿಕೆಯಿಂದ ಪ್ರಯಾಣಿಸಬೇಕಾದ ಅಗತ್ಯವಿದೆ. ಜೋಗ ಜಲಪಾತಕ್ಕೆ ಹೋಗುವ ರಸ್ತೆಯಲ್ಲೇ ಕರಿ ಚಿರತೆಯೊಂದು ಹಸುವನ್ನು ಬೇಟೆಯಾಡಿರುವುದು ಬೆಳಕಿಗೆ ಬಂದಿದೆ.
ಸಾಗರ ತಾಲೂಕಿನ ವಡನಬೈಲಿನಲ್ಲಿ ಕರಿ ಚಿರತೆ ಪ್ರತ್ಯಕ್ಷವಾಗಿದ್ದು, ಹಸುವನ್ನು ಬೇಟೆಯಾಡಿ ಪೊದೆಯೊಳಗೆ ಎಳೆದೊಯ್ದಿದೆ. ಕರಿಚಿರತೆ ಹಸುವನ್ನು ಬೇಟೆಯಾಡುತ್ತಿರುವ ದೃಶ್ಯ ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಪ್ರಯಾಣಿಸುವವರು ಎಚ್ಚರಿಕೆ ವಹಿಸುವ ಅಗತ್ಯವಿದೆ. ಇಲ್ಲವಾದಲ್ಲಿ ಕಾಡುಪ್ರಾಣಿಗಳ ದಾಳಿಗೊಳಗಾಗುವ ಭೀತಿಯಿದೆ.