Wednesday, January 15, 2025
HomeUncategorizedಪತ್ರಕರ್ತ ಹರೀಶ್ ಮೋಟುಕಾನರಿಗೆ ಗೃಹರಕ್ಷಕದಳದಿಂದ ಸನ್ಮಾನ

ಪತ್ರಕರ್ತ ಹರೀಶ್ ಮೋಟುಕಾನರಿಗೆ ಗೃಹರಕ್ಷಕದಳದಿಂದ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ವತಿಯಿಂದ ಭಾನುವಾರ ಮಂಗಳೂರಿನ ಮೇರಿಹಿಲ್ ನಲ್ಲಿರುವ ಜಿಲ್ಲಾ ಕಚೇರಿಯಲ್ಲಿ ಜರುಗಿದ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಅಮರ ಪಡ್ನೂರು ಗ್ರಾಮದವರಾಗಿದ್ದು, ಮಂಗಳೂರಿನಲ್ಲಿ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರರಾಗಿರುವ ಹರೀಶ್ ಮೋಟುಕಾನ ಅವರನ್ನು ಸನ್ಮಾನಿಸಲಾಯಿತು.
ಗೃಹರಕ್ಷಕದಳಕ್ಕೆ ಕಳೆದ ಹತ್ತು ವರ್ಷಗಳಿಂದ ನೀಡಿದ ಮಾಧ್ಯಮ ಸಹಕಾರವನ್ನು ಪರಿಗಣಿಸಿ ಸನ್ಮಾನಿಸಲಾಯಿತು.
ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಪೊಲೀಸ್ ಹೆಚ್ಚುವರಿ ಅಧೀಕ್ಷಕ ರಾಜೇಂದ್ರ ಡಿ.ಎಸ್., ಗೃಹರಕ್ಷಕದಳದ ಸಮಾದೇಷ್ಟ ಡಾ.ಮುರಲೀ ಮೋಹನ್ ಚೂಂತಾರು, ಪ್ಲಟೂನ್ ಕಮಾಂಡರ್ ಮಾರ್ಕ್ ಸೆರಾ, ವಾಣಿ ಹರೀಶ್ ಮೊದಲಾದವರಿದ್ದರು.

RELATED ARTICLES
- Advertisment -
Google search engine

Most Popular