ಉಪ್ಪಿನಂಗಡಿ: ಇಲಂತಿಲದ ಜ್ಞಾನ ಭಾರತಿ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ–ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪಿಟಿಎ ಅಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಚಾಲಕರಾದ ಅಬ್ದುಲ್ ರವೂಫ್ ಯು.ಟಿ., ಶುಕೂರ್ (ಉಪಾಧ್ಯಕ್ಷರು) ಹಾಗೂ ಮಜೀದ್ ಮಟ (ಪಿಟಿಎ ಖಜಾಂಚಿ) ಉಪಸ್ಥಿತರಿದ್ದರು. ಪೋಷಕರಾದ ಇಲ್ಯಾಸ್, ಅಬುಬಕ್ಕರ್, ಅಝೀಝ್, ಹೈದರ್ ಹಾಗೂ ಫೌಝಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಾಲೆಯ ಪ್ರಾಂಶುಪಾಲರಾದ ಇಬ್ರಾಹಿಂ ಖಲೀಲ್ ಅವರು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ಪ್ರೇರಣಾದಾಯಕ ಮಾತುಗಳನ್ನಾಡಿದರು. ಹೆಚ್.ಎಂ. ಅರುಣಾ, ತಾಹಿರಾ ಮೇಡಂ ಸೇರಿದಂತೆ ಶಿಕ್ಷಕ ವೃಂದದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಭಾಷಣ, ಕರಕುಶಲ (Craft) ಹಾಗೂ ಛದ್ಮವೇಷ (Fancy Dress) ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಸ್ಪರ್ಧಾ ವಿಜೇತರಿಗೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲಾ ಪೋಷಕರು ಹಾಗೂ ಶಿಕ್ಷಕ ವೃಂದಕ್ಕೆ ಕೃತಜ್ಞತೆ ಸಲ್ಲಿಸಲಾಯಿತು.

