ಜೂ. 30: ಸೈಂಟ್ ಅಲೋಷಿಯಸ್ ವಿದ್ಯಾರ್ಥಿಗಳಿಂದ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನ

0
97

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಐದನೇ ಕೂಟವು ಜೂ. 30ರಂದು ನಡೆಯಲಿದೆ.
ವಿದ್ಯಾರ್ಥಿ ಯುವ ಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಈ ಅಭಿಯಾನದ ಐದನೇ ಕೂಟದಲ್ಲಿ ಮಂಗಳೂರಿನ ಸೈಂಟ್ ಅಲೋಷಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ತುಳು ವಿಭಾಗ ಹಾಗೂ ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸುವರು.
ಕಾರ್ಯಕ್ರಮವನ್ನು ಬೆಳಿಗ್ಗೆ 10:00 ಗಂಟೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ ಅವರು ಉದ್ಘಾಟಿಸುವರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ಅಕಾಡೆಮಿಯ ಮಾಜಿ ಸದಸ್ಯೆ ವಿಜಯಲಕ್ಷ್ಮಿ ಪ್ರಸಾದ ರೈ, ಸಂತ ಆಲೋಸಿಯಸ್ ಸಂಸ್ಥೆಯ ಉಪನ್ಯಾಸಕಿ ಪ್ರಶಾಂತಿ ಶೆಟ್ಟಿ ಇರುವೈಲು ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here