ಜುಲೈ 16 : ಶ್ರೀ ಕ್ಷೇತ್ರ ಕದ್ರಿಯಲ್ಲಿ ಮಳೆಗಾಗಿ ಹಾಗೂ ನಾಡಿನ ಸುಭಿಕ್ಷೆಗಾಗಿ “ಪರ್ಜನ್ಯ ಜಪ” ಪಾರಾಯಣ

0
16

ಅಖಿಲ ಭಾರತ ಬ್ರಾಹ್ಮಣ ಒಕ್ಕೂಟ, ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದೊಂದಿಗೆ ಕಲ್ಕೂರ ಪ್ರತಿಷ್ಠಾನದ ಆಯೋಜಕತ್ವದಲ್ಲಿ ಲೋಕ ಕಲ್ಯಾಣಾರ್ಥ ಮತ್ತು ವರುಣನ ಕೃಪೆಗಾಗಿ ಜುಲೈ, 16 ಗುರುವಾರದಂದು ಬೆಳಿಗ್ಗೆ 6ರಿಂದ 7ರ ವರೆಗೆ ಕದ್ರಿ ದೇವಳದ ಕೆರೆಯ ಪ್ರಾಂಗಣದಲ್ಲಿ ಪರ್ಜನ್ಯ ಜಪ ಪಾರಾಯಣ ಜರಗಲಿದೆ.

ಸಮಸ್ತ ಬ್ರಾಹ್ಮಣ ಸಮಾಜದ ಬಂಧುಗಳು ಅನುಷ್ಠಾನದೊಂದಿಗೆ ಸಾಂಪ್ರದಾಯಿಕ ಉಡುಗೆ ಧರಿಸಿ ಪಾಲ್ಗೊಳ್ಳಲಿದ್ದು, ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ. ಎ.ಜೆ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳು, ಕಾರ್ಯನಿರ್ವಹಣಾಧಿಕಾರಿಗಳು ಸಹಕಾರ ನೀಡಲಿದ್ದು, ಕದ್ರಿ ದೇವಸ್ಥಾನದ ತಂತ್ರಿಗಳಾದ ವೇ|ಮೂ| ಶ್ರೀ ವಿಠಲದಾಸ ತಂತ್ರಿಗಳ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಅರ್ಚಕರಾದ ಅಡಿಗ ಬಂಧುಗಳು ಸಹಕರಿಸಲಿದ್ದಾರೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.

ಮುಂಜಾನೆ 5-50 ಕ್ಕೆ ದೀಪ ಪ್ರಜ್ವಲನೆಯೊಂದಿಗೆ ಆರಂಭಗೊಂಡು, ಗುರು ವಂದನೆ, ಗಣಪತಿ ಪ್ರಾರ್ಥನೆ, ಸರಸ್ವತಿ ಪ್ರಾರ್ಥನೆ, ಅಥರ್ವ ಶೀರ್ಷ, ಪರ್ಜನ್ಯ ಜಪ, ರುದ್ರ ಪಾರಾಯಣ, ವಿಷ್ಣು ಸಹಸ್ರನಾಮ, ಐಕ್ಯ ಮಂತ್ರಗಳೊಂದಿಗೆ ಪ್ರಾರ್ಥನೆ ಸಲ್ಲಿಸಲಾಗುವುದು.

ವಿಪ್ರ ಬಂಧುಗಳೆಲ್ಲರೂ ಸಾಂಪ್ರದಾಯಿಕ ಉಡುಗೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ವಿನಂತಿಸಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ರಘುರಾಮ – 7760054238, ರಾಮಚಂದ್ರ ಭಟ್ ಎಲ್ಲೂರು – 9448870661, ಸುಧಾಕರ ರಾವ್ ಪೇಜಾವರ – 9448546051, ಶ್ರೀಧರ ಹೊಳ್ಳ – 9844401834 ಅಥವಾ ಎಸ್. ಪ್ರದೀಪ ಕುಮಾರ ಕಲ್ಕೂರ – 9845083736 ಇವರನ್ನು ಸಂಪರ್ಕಿಸಬಹುದಾಗಿದೆ.