ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನಂದಳಿಕೆಯ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ತುಳು ಪರ್ಬ ಮತ್ತು ತುಳು ಕವಿ ಗೋಷ್ಠಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಜತ ಮಹೋತ್ಸವ ಸಭಾಂಗಣದಲ್ಲಿ ಜು.27 ರಂದು ಬೆಳಿಗ್ಗೆ 11.00 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಾಹಿತಿ ಹಾಗೂ ನಿವೃತ್ತ ಪ್ರಾಂಶುಪಾಲರಾದ ಬಿ. ಜರ್ನಾಧನ ಭಟ್ ನಡೆಸಿಕೊಡುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ದಿನೇಶ್ ಪೂಜಾರಿ , ಅಕಾಡೆಮಿ ಸದಸ್ಯರಾದ ಪಾಂಗಾಳ ಬಾಬು ಕೊರಗ ಇವರು ಉಪಸ್ಥಿತರಿರುವರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ತುಳು ಕವಿಗೋಷ್ಠಿ ನಡೆಯಲಿದ್ದು, ಶ್ರೀಮತಿ ವಾಸಂತಿ ಅಂಬಲಪಾಡಿ, ಶ್ರೀ ಹರಿಪ್ರಸಾದ್ ನಂದಳಿಕೆ, ಕುಮಾರಿ ದೀಪಿಕಾ ಉಡುಪಿ, ಶ್ರೀಮತಿ ಸುಲೋಚನಾ ಪಚ್ಚಿನಡ್ಕ, ಶ್ರೀಮತಿ ಶ್ರೀ ಮುದ್ರಾಡಿ ಇವರು ಕವಿಗೋಷ್ಠಿಯಲ್ಲಿ ಭಾಗವಹಿಸುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ