ಆ .7 ‘ಬಲೆ ತುಳು ಓದುಗ’ : ಅಕಾಡೆಮಿಗೆ ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿಗಳ ಭೇಟಿ

0
10

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ , ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಹದಿನಾರನೇ ಕರ‍್ಯಕ್ರಮ ಆ.7 ರಂದು ನಡೆಯಲಿದೆ.

ಶುಕ್ರವಾರದಂದು ಉಜಿರೆ ಶ್ರೀ ರ‍್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ೫೦ ವಿದ್ಯರ‍್ಥಿಗಳು ರ‍್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು.

ಕಾರ‍್ಯಕ್ರಮವನ್ನು ಬೆಳಿಗ್ಗೆ 10.00 ಗಂಟೆಗೆ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಹಿರಿಯ ಸಂಶೋಧಕ ಬೆನೆಟ್ ಜಿ. ಅಮ್ಮನ್ನ ಅವರು ಉದ್ಘಾಟಿಸಿ,ದಿಕ್ಸೂಚಿ ಮಾತನ್ನಾಡುವರು.

ಮುಖ್ಯ ಅತಿಥಿಯಾಗಿ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಳಾ ಟಿ ಶೆಟ್ಟಿ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಹಾಗೂ ಅಕಾಡೆಮಿಯ ಮಾಜಿ ಸದಸ್ಯರಾದ ಡಾ.ದಿವಾ ಕೊಕ್ಕಡ ಕೊಯ್ಯೂರು, ಎಸ್.ಡಿ.ಎಂ. ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ.ರವಿಶಂಕರ ಜಿ.ಕೆ ಭಾಗವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.