ಮಂಗಳೂರು: ತುಳು ಸಾಹಿತ್ಯ ಅಕಾಡೆಮಿಯ ಹೊಸ ನಾಟಕ ನಿರ್ಮಾಣ ಯೋಜನೆಯನ್ವಯ ರೂಪುಗೊಂಡ ತುಳುನಾಡಿನ ಸೌಹಾರ್ದ ಪರಂಪರೆಯನ್ನು ಬಿಂಬಿಸುವ ‘ಜಾಗ್ ರ್ತೆ.!?’ ಕಿರು ತುಳು ನಾಟಕದ ಪ್ರಥಮ ಪ್ರದರ್ಶನ ಜು. 7 ರಂದು ಹಂಪನಕಟ್ಟೆ ಮಿಲಾಗ್ರಿಸ್ ಪ. ಪೂ. ಕಾಲೇಜಿನಲ್ಲಿ ನಡೆಯಲಿದೆ.
ರಂಗ ಚಲನ ತಂಡದ ಹೆಸರಾಂತ ನಾಟಕ ಕಲಾವಿದ ತುಳುನಾಡ ರತ್ನ ದಿನೇಶ್ ಅತ್ತಾವರ ಅವರು ಈ ಕಿರು ನಾಟಕವನ್ನು ನಿರ್ದೇಶನ ಮಾಡಿದ್ದಾರೆ.
ಸೋಮವಾರ ಬೆಳಿಗ್ಗೆ 11.30 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಬದ್ರಿಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಎನ್. ಇಸ್ಮಾಯಿಲ್ ನಡೆಸಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ವಹಿಸಲಿರುವರು. ನಾಟಕ ಹಾಗೂ ಚಲನಚಿತ್ರ ನಟಿ ಶ್ರೀಮತಿ ಸುನೀತಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ, ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೇಲ್ವಿನ್ ವಾಸ್ ಉಪಸ್ಥಿತರಿರುವರು ಎಂದು ತುಳು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.