ಜೂ. 21 : ಕೈ ಮಗ್ಗ ಕುಶಲಕರ್ಮಿ ದೇವಕಿ ಶೆಟ್ಟಿಗಾರ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ

0
326

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ತುಳುನಾಡಿನ ಪಾರಂಪರಿಕ ಕೈ ಮಗ್ಗದ ಕುಶಲಕರ್ಮಿ ದೇವಕಿ ಶೆಟ್ಟಿಗಾರ್ ಅವರಿಗೆ ಚಾವಡಿ ತಮ್ಮನದ ಗೌರವ ಸಮರ್ಪಣೆಯ ಕಾರ್ಯಕ್ರಮ ಜೂನ್ 21ರಂದು ಬೆಳಿಗ್ಗೆ 10.30 ಗಂಟೆಗೆ ಕಿನ್ನಿಗೋಳಿಯ ತಾಳಿ ಪಾಡಿ ನೇಕಾರರ ಸೌಧದಲ್ಲಿ ನಡೆಯಲಿದೆ.
ಚಾವಡಿ ತಮ್ಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ವಹಿಸುವರು. ಎ.ಬಿ ಶೆಟ್ಟಿ ದಂತ ವೈದ್ಯಕೀಯ ಸಂಸ್ಥೆಯ ಅಸೋಸಿಯೇಟ್ ಡೀನ್ ಡಾ.ಅಮರಶ್ರೀ ಅಮರನಾಥ ಶೆಟ್ಟಿ ಅವರು ಚಾವಡಿ ತಮ್ಮನ ನಡೆಸಿಕೊಡುವರು. ಕಿನ್ನಿಗೋಳಿಯ ಅನಂತ ಪ್ರಕಾಶ ಸಂಪಾದಕರಾದ ಕೊಡೆತ್ತೂರು ಸಚ್ಚಿದಾನಂದ ಉಡುಪ , ಹಿರಿಯ ಸಾಹಿತಿ ಡಾ. ಪ್ರಭಾಕರ ನೀರ್ ಮಾರ್ಗ, ತುಳು ಪರಿಷತ್ ಅಧ್ಯಕ್ಷರಾದ ಶುಭೋದಯ ಆಳ್ವ ಹಾಗೂ ತಾಳಿಪಾಡಿ ಪ್ರಾಥಮಿಕ ನೇಕಾರರ ಸೇವಾ ಸಂಘದ ಅಧ್ಯಕ್ಷೆಯಾದ ರುಕ್ಮಿಣಿ ಶೆಟ್ಟಿಗಾರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕದಿಕೆ ಟ್ರಸ್ಟ್ ಅಧ್ಯಕ್ಷರಾದ ಮಮತಾ ರೈ ಅಭಿನಂದನಾ ಭಾಷಣ ಮಾಡುವರು ಎಂದು ತುಳು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here