Saturday, May 24, 2025
Homeಉಡುಪಿಜು.20 : ಬಿಜೆಪಿ ಉಡುಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ

ಜು.20 : ಬಿಜೆಪಿ ಉಡುಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ

ಬಿಜೆಪಿ ಉಡುಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಜು.20, ಶನಿವಾರ ಬೆಳಿಗ್ಗೆ ಗಂಟೆ 9.30ರಿಂದ ಮಧ್ಯಾಹ್ನ ಗಂಟೆ 1.30ರ ವರೆಗೆ ಉಡುಪಿ ಬನ್ನಂಜೆಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಬೆಳಿಗ್ಗೆ ಗಂಟೆ 10.00ಕ್ಕೆ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಸಕಲೇಶಪುರ ಶಾಸಕ, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು ಉದ್ಘಾಟಿಸಲಿದ್ದಾರೆ.

ಮಧ್ಯಾಹ್ನ ಗಂಟೆ 1.00ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಮಾರೋಪ ಭಾಷಣ ಮಾಡಲಿದ್ದಾರೆ.

ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು, ಜಿಲ್ಲಾ ಖಾಯಂ ಆಹ್ವಾನಿತರು, ಜಿಲ್ಲಾ ವಿಶೇಷ ಆಹ್ವಾನಿತರು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular