ಗೋವಾ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ)ಗೋವಾ ಘಟಕದ ಗಣೇಶ್ ಇರ್ವತ್ತೂರು ಅಧ್ಯಕ್ಷರು ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಇವರ ಸಾರಥ್ಯದಲ್ಲಿ ದ್ವಿತೀಯ ವರ್ಷದ ವಾರ್ಷಿಕೋತ್ಸವ ಸಮಾರಂಭವು ಜೂನ್ 22 ರಂದು ಆದಿತ್ಯವಾರ ಮಧ್ಯಾಹ್ನ 3 ಗಂಟೆಗೆ ಇನ್ಸ್ಟಿಟ್ಯೂಟ್ ಮೆನೆಜಸ್ ಬ್ರಗಾಬ್ಸ್ ಸಭಾಗೃಹ ಪಣಜಿ ಗೋವಾದಲ್ಲಿ ನಡೆಯಲಿದೆ.
ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ದಕ್ಷ ಸಾರಥ್ಯದಲ್ಲಿ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯೊಂದಿಗೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವ್ವಜ ಕ್ಷೇತ್ರ ಪಾವಂಜೆ ಹಳೆಯಂಗಡಿ ಇವರಿಂದ ದೇವಿ ಮಹಾತ್ಮೆ ಯಕ್ಷಗಾನ ನಡೆಯಲಿದೆ.
Home Uncategorized ಜೂ.22: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ) ಮಂಗಳೂರು ಗೋವಾ ಘಟಕದ ದ್ವಿತೀಯ ವರ್ಷದ ವಾರ್ಷಿಕೋತ್ಸವ