ಕೆ. ನಾಗರಾಜ್‌ಗೆ ‘ಕನ್ನಡ ಪಯಸ್ವಿನಿ ಕಲಾ ರತ್ನ’ ಅಂತರ್‌ರಾಜ್ಯ ಪ್ರಶಸ್ತಿ–2026

0
3

ಕಾಸರಗೋಡು : ಬೆಂಗಳೂರಿನ ಖ್ಯಾತ ಜಾನಪದ ಕಲಾ ಪೋಷಕ ಹಾಗೂ ಸಂಘಟಕ ಕೆ. ನಾಗರಾಜ್ ಅವರನ್ನು ‘ಕನ್ನಡ ಪಯಸ್ವಿನಿ ಕಲಾ ರತ್ನ’ ಅಂತರ್‌ರಾಜ್ಯ ಪ್ರಶಸ್ತಿ–2026ಗೆ ಆಯ್ಕೆ ಮಾಡಲಾಗಿದೆ.

ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಜುಲೈ 26, 2026ರಂದು ನಡೆಯಲಿರುವ ‘ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನ–2026’ದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗುವುದು.

ಜಾನಪದ ಕಲೆ, ಕನ್ನಡ ಸಂಸ್ಕೃತಿ ಮತ್ತು ಕಲಾವಿದರ ಪ್ರೋತ್ಸಾಹಕ್ಕಾಗಿ ಕೆ. ನಾಗರಾಜ್ ಅವರು ಸಲ್ಲಿಸಿರುವ ಮಹತ್ವದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಜುಲೈ 26ರಂದು ನಡೆಯಲಿರುವ ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನ–2026ದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ರಾಷ್ಟ್ರೀಯ ಹಾಗೂ ಅಂತರ್‌ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪ್ರದಾನಿಸಿ ಸನ್ಮಾನಿಸಲಾಗುವುದು.

LEAVE A REPLY

Please enter your comment!
Please enter your name here