ಕಾರ್ಕಳ ಭುವನೇಂದ್ರ ಪ್ರೌಢಶಾಲೆಯಲ್ಲಿ ಕಬಡ್ಡಿ ಪಂದ್ಯಾಟ

0
4

ಕ್ರೀಡಾ ಭಾರತಿ ಕಾರ್ಕಳ ತಾಲೂಕು ಘಟಕ ಹಾಗೂ ಶ್ರೀಮದ್ ಭುವನೇಂದ್ರ ವಿದ್ಯಾ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಕಳದ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯ ಆವರಣದಲ್ಲಿ ಬಾಲಕರ ಬಾಲಕಿಯರ ಕಬ್ಬಡಿ ಪಂದ್ಯಾಟವು ತಾ: 04-07-2026 ಶನಿವಾರ ಜರಗಿತು. ಕ್ರೀಡಾ ಭಾರತಿಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಮಂಜುನಾಥ ಶೆಟ್ಟಿ ಇವರು ದೀಪ ಬೆಳಗಿಸಿ ಉದ್ಘಾಟಿಸಿ ಕ್ರೀಡಾ ಭಾರತಿಯು ಕಬಡ್ಡಿಯನ್ನು ಒಲಂಪಿಕ್ಸ್ ನಲ್ಲಿ ಸೇರಿಸುವ ಪ್ರಯತ್ನದಿಂದ ಈ ವರ್ಷವನ್ನು ಕಬ್ಬಡಿ ವರ್ಷವನ್ನಾಗಿ ಆಚರಿಸಿ ದೇಶಾದ್ಯಂತ ಕಬ್ಬಡ್ಡಿ ಪಂದ್ಯಗಳನ್ನು ನಡೆಸುತ್ತಿದೆ. ಕಬ್ಬಡ್ಡಿ ಆಟಕ್ಕೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ ಇದು ನಮ್ಮ ದೇಶೀಯ ಆಟವಾಗಿದೆ ಎಂದು ಉದ್ಘಾಟನಾ ಭಾಷಣದಲ್ಲಿ ಹೇಳಿದರು. ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀ ಆರ್ ನಾರಾಯಣ ಶೆಣೈ ಯವರು ಪಂದ್ಯಾಟದ ಅಂಗಣ ಉದ್ಘಾಟನೆಯನ್ನು ತೆಂಗಿನ ಕಾಯಿ ಒಡೆಯುವುದರ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾ ಕಿಣಿ , ಕ್ರೀಡಾ ಭಾರತಿಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶ್ರೀ ಪ್ರಸನ್ನ ಶೆಣೈ ರೆಂಜಾಳ , ಶಿಕ್ಷಕಿ ಸೀಮಾ ಕಾಮತ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಕ್ರೀಡಾ ಭಾರತಿ ಕಾರ್ಕಳ ತಾಲೂಕು ಕಾರ್ಯದರ್ಶಿ ಶ್ರೀ ಸಂಜಯ್ ಕುಮಾರ್ ನೆರವೇರಿಸಿದರು. ಕ್ರೀಡಾಭಾರತಿಯ ಉಡುಪಿ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀ ಗಣಪಯ್ಯ ವಂದಿಸಿದರು. ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ತಾರಾನಾಥ್ ಶೆಟ್ಟಿ ಇವರು ಕಬ್ಬಡ್ಡಿ ಪಂದ್ಯಾಟದ ತೀರ್ಪುಗಾರರಾಗಿ ಪಂದ್ಯಾಟವನ್ನು ನಡೆಸಿಕೊಟ್ಟರು. ಬಳಿಕ ನಡೆದ
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಶ್ರೀ ಆನಂದ ಭಟ್, ಹಿರಿಯ ಸ್ವಯಂಸೇವಕರು ರಾಷ್ಟ್ರೀಯ ಸ್ವಯಂಸೇವಕ ಸಂಘ ಕಾರ್ಕಳ ಹಾಗೂ ಕ್ರೀಡಾ ಭಾರತಿ ಕಾರ್ಕಳ ತಾಲೂಕು ಅಧ್ಯಕ್ಷರಾದ ಶ್ರೀ ಶಿವಾನಂದ ಕಾಮತ್ , ಶಾಲಾ ಆಡಳಿತ ಮಂಡಳಿಯ ಸಂಚಾಲಕ ಶ್ರೀ ನರೇಂದ್ರ ಕಾಮತ್ . ಕೆ ರವರು ಮಕ್ಕಳಿಗೆ ಪ್ರಶಸ್ತಿ ಪತ್ರ ಮತ್ತು ಪದಕವನ್ನು ವಿತರಿಸಿದರು. ಪಂದ್ಯ ಕೂಟದಲ್ಲಿ ಒಟ್ಟು 11 ತಂಡಗಳು ಭಾಗವಹಿಸಿದ್ದವು.

LEAVE A REPLY

Please enter your comment!
Please enter your name here