ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮಂಗಳವಾರ ನಡೆದ ಚಂಡಿಕಾಯಾಗ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸ್ಯಾಕ್ಸೋಫೋನ್ ವಾದಕ ಕೆ.ಬಾಬು ಸಪಲ್ಯ ವಗ್ಗ ಇವರಿಗೆ ಸಾರ್ವಜನಿಕ ಅಭಿನಂದನೆ ಸಲ್ಲಿಸಲಾಯಿತು.
ಕಾವಳಪಡೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಪ್ರಮೋದ್ ಕುಮಾರ್ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಹಿರಿಯ ಸಾಧಕರಿಗೆ ದೊರೆತ ಈ ಪ್ರಶಸ್ತಿ ಕಾಡಬೆಟ್ಟು ಗ್ರಾಮಕ್ಕೆ ಸಂದ ಗೌರವ’ ಎಂದರು.
ಇದೇ ವೇಳೆ ಗ್ರಾಮಣಿ ಗಣಪತಿ ಮುಚ್ಚಿನ್ನಾಯ ಮತ್ತು ಸುದರ್ಶನ್ ಬಲ್ಲಾಳ್ ಮಾರ್ಗದರ್ಶನದಲ್ಲಿ ‘ಚಂಡಿಕಾಯಾಗ’ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಪಿಲಿಂಗಾಲು ಶ್ರೀ ಗಾಯತ್ರಿದೇವಿ ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್, ಮಾಜಿ ಸಚಿವ ಬಿ.ರಮಾನಾಥ ರೈ, ಬೂಡ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್, ಕೆಡಿಪಿ ಮಾಜಿ ಸದಸ್ಯ ಉಮೇಶ ಬೋಳಂತೂರು, ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ, ಕಾರ್ಯದರ್ಶಿ ಬಾಲಕೃಷ್ಣ ಸೆರ್ಕಳ, ಮಂಗಳೂರು ತಾಲ್ಲೂಕು ಸಂಘದ ಗೌರವಾಧ್ಯಕ್ಷ ನಾರಾಯಣ ಸಪಲ್ಯ ಕಣ್ಣೂರು, ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ನಾಗೇಶ ಕಲ್ಲಡ್ಕ, ಮಾಜಿ ಅಧ್ಯಕ್ಷ ವಿಶ್ವನಾಥ ಎಸ್.ಬಿ.ಸಿ.ರೋಡು, ನಿರ್ದೇಶಕ ಭುವನೇಶ್ ಮೊಗರ್ನಾಡು, ಮಾಜಿ ನಿರ್ದೇಶಕ ಮೋಹನ್ ಕೆ.ಶ್ರೀಯಾನ್ ರಾಯಿ, ಕಾರಿಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್, ಮಾಜಿ ಅಧ್ಯಕ್ಷ ಪಿ.ಜಿನರಾಜ ಅರಿಗ, ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀ ನಾರಾಯಣ ಶರ್ಮ, ಪಿಡಿಒ ರಚನ್ ಶೆಟ್ಟಿ, ನಿವೃತ್ತ ಪಿಡಿಒ ವೇದವ ಗಾಣಿಗ, ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷ ನವೀನ್ ಕೋಟ್ಯಾನ್, ಭಜನಾ ಮಂದಿರ ಅಧ್ಯಕ್ಷ ಪ್ರಮೋದ್ ಆಚಾರ್ಯ ಮತ್ತಿತರರು ಇದ್ದರು.
ಶಿಕ್ಷಕ ಕೃಷ್ಣ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

