ವರದಿ ರಾಯಿ ರಾಜ ಕುಮಾರ
ಮಂಗಳೂರಿನ ಪಾರಾದೀಪ್ ಫಾಸ್ಫೇಟ್ಸ್, ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಹಾಗೂ ಮೂಡುಬಿದಿರೆ, ಕಡಲಕೆರೆ ಸೇವಾಂಜಲಿ ಎಜುಕೇಶನಲ್ ಟ್ರಸ್ಟ್ ಸಹಯೋಗದಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ ಕಡಲ ಕೆರೆಯ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನವರಿ 4ರಂದು ನಡೆಯಿತು. ಶಿಬಿರವನ್ನು ದೀಪ ಬೆಳಗಿ ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪಾರಾದೀಪ್ ಸಂಸ್ಥೆಯ ಮುಖ್ಯಸ್ಥರು, ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸೇವಾಂಜಲಿ ಎಜುಕೇಶನ್ ಟ್ರಸ್ಟ್ ನ ರಾಜೇಶ್ ಬಂಗೇರ ಹಾಗೂ ಇತರ ಪದಾಧಿಕಾರಿಗಳು ಹಾಜರಿದ್ದರು.
ಶಿಬಿರದಲ್ಲಿ ನೇತ್ರ ತಜ್ಞರಿಂದ ಕಣ್ಣಿನ ಪರೀಕ್ಷೆ, ಸಲಹೆಗಳು, ಅಗತ್ಯ ಉಳ್ಳವರಿಗೆ ಶಾಸ್ತ್ರ ಚಿಕಿತ್ಸೆ, ಅರ್ಹರಿಗೆ ಉಚಿತ ಕನ್ನಡಕ,, ಚಿಕಿತ್ಸೆ, ರಕ್ತದೊತ್ತಡ ತಪಾಸಣೆ, ಚಿಕಿತ್ಸೆ, ರಕ್ತ ಪರೀಕ್ಷೆ ಇತ್ಯಾದಿಗಳನ್ನು ನಡೆಸಲಾಯಿತು. ಸುಮಾರು ನೂರಕ್ಕೂ ಹೆಚ್ಚು ಫಲಾನುಭವಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.


