ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆ ಕಡಲಕೆರೆಯಲ್ಲಿ ಈ ವರ್ಷದ ದೋಣಿ ವಿಹಾರಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ ನೀಡಿದರು. ಈ ಸಾಲಿನ ದೋಣಿ ವಿಹಾರಕ್ಕೆ ಮಂಗಳವಾರ ಸಂಜೆ ಚಾಲನೆ ನೀಡಲಾಯಿತು. ಈ ವೇಳೆ ಸುಮಾರು 20,000 ಕಾಟ್ಲಾ ಮತ್ತು 20,000 ಕಾಮನ್ ಕಾರ್ಪ್ ಮೀನಿನ ಮರಿಗಳನ್ನು ಕೆರೆಗೆ ಬಿಡಲಾಯಿತು. ಮಾಜಿ ಸಚಿವ ಅಭಯಚಂದ್ರ ಜೈನ್, ಪುರಸಭೆ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷ ನಾಗರಾಜ ಪೂಜಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ರೋಟರಿ ಅಧ್ಯಕ್ಷ ರವಿಪ್ರಸಾದ್ ಉಪಾಧ್ಯಾಯ ಉಪಸ್ಥಿತರಿದ್ದರು.
ಮೂಡುಬಿದಿರೆ | ಕಡಲಕೆರೆಯಲ್ಲಿ ದೋಣಿ ವಿಹಾರಕ್ಕೆ ಚಾಲನೆ
RELATED ARTICLES