ಕಡಂದಲೆ: ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ 13.12.2025 ರಂದು ನಡೆಯುವ ಶಾಲಾ ಮತ್ತು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಸಭಾ ಕಾರ್ಯಕ್ರಮವನ್ನು ಮಾಡಲಾಯಿತು. ಸಭಾ ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ನ್ಯಾಯವಾದಿ ಕೆ ಆರ್ ಪಂಡಿತ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮೂಡಬಿದ್ರೆ ಶಿಕ್ಷಕ ಸಂಘದ ಅಧ್ಯಕ್ಷರಾಗಿರುವ ರಾಮಕೃಷ್ಣ ಶಿರೂರು, ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರುವ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ, ಜೆಸಿ ವಲಯ 15ರ ಉಪಾಧ್ಯಕ್ಷರಾಗಿರುವ ಜೆ ಸಿ ಪ್ರಶಾಂತ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆಗಿರುವ ಸುರೇಂದ್ರ ಭಟ್., ಶಾಲಾ ಮುಖ್ಯ ಶಿಕ್ಷಕರಾಗಿರುವ ದಿನಕರ್ ಕುಂಭಾಶಿ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿರುವ ರಶ್ಮಿ ರಾಜೇಶ್, ಶಾಲಾ ಕನ್ನಡ ಶಿಕ್ಷಕಿ ಆಗಿರುವ ಚಂದ್ರಕಲಾ ರಾಜಶೇಖರ್ ಉಪಸ್ಥಿತರಿದ್ದರು.

ಕನ್ನಡ ರಾಜ್ಯೋತ್ಸವದ ಪಥ ಸಂಚಲನ ನಾಡಗೀತೆ ಕನ್ನಡದ ವೈವಿಧ್ಯಮ ಹೊಂದಿರುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಿಕ್ಷಕರಾಗಿರುವ ಸುಧಾಕರ್  ನಿರೂಪಿಸಿದರು.  ಸದಾಶಿವ ಉಪಾಧ್ಯಾಯ ವಂದನಾರ್ಪಣೆ ಮಾಡಿದರು.
ಸಭಾ ಕಾರ್ಯಕ್ರಮದ ನಂತರ ಶಾಲಾ ಮತ್ತು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವದ ಪೂರ್ವಭಾವಿ ಸಭೆ ಶಾಲಾ ಆಳತ ಮಂಡಳಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಯಿತು. ಅತ್ಯಧಿಕ ಸಂಖ್ಯೆಯಲ್ಲಿ ಹಳೆ ವಿದ್ಯಾರ್ಥಿಗಳು ಭಾಗವಹಿಸಿ ಪೂರ್ವಭಾವಿ ಸಭೆಯನ್ನು ಯಶಸ್ಸಿಗೊಳಿಸಿರುತ್ತಾರೆ.

