ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ 102ನೇ ದಿನದ ಪ್ರದಕ್ಷಿಣೆಗೆ ದಿನಾಂಕ: 23-09-2024 ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವಸ್ಥಾನದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತು ಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಗೀತಾಂಜಲಿ ಎಮ್. ಸುವರ್ಣ, ಶ್ರೀ ಸತೀಶ್ ದೇವಾಡಿಗ, ಶಶಾಂಕ್, ಆರ್ಯನ್ ಹಾಗೂ ಅಭಿಮಾನಿ ಭಕ್ತರು ಉಪಸ್ಥಿತರಿದ್ದರು