ಮೂಡುಬಿದಿರೆ: ತಾಲೂಕಿನ ನಾಲ್ಕು ಅಂಗನವಾಡಿ ಕೇಂದ್ರಗಳಲ್ಲಿ ನ.28ರಿಂದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳು ಅಧಿಕೃತವಾಗಿ ಪ್ರಾರಂಭಗೊಳ್ಳಲಿದ್ದು, ಅದರಲ್ಲಿ ಕಡಂದಲೆ ವಿದ್ಯಾಗಿರಿಯ ಅಂಗನವಾಡಿ ಕೇಂದ್ರವೂ ಸೇರಿದೆ.

ಮಕ್ಕಳ ಸಂಖ್ಯೆಗೆ ಅನುಗುಣವಾಗಿ ತಾಲೂಕಿನ ನಾಲ್ಕು ಕೇಂದ್ರಗಳಲ್ಲಿ ಈ ವ್ಯವಸ್ಥೆ ಪ್ರಾರಂಭಗೊಂಡಿದೆ. ಕಡಂದಲೆ ವಿದ್ಯಾಗಿರಿ, ಗಾಂಧಿನಗರ, ಪುತ್ತಿಗೆ, ವಾಲ್ಪಾಡಿ ಮಾಡದಂಗಡಿಯಲ್ಲಿ ಈ ತರಗತಿಗಳು ಪ್ರಾರಂಭಗೊಂಡಿದೆ. ಈ ಕೇಂದ್ರಗಳಿಗೆ ಈಗಾಗಲೇ ಸರ್ಕಾರದಿಂದ ಅಗತ್ಯವಾದ ಪಠ್ಯ ಸಾಮಗ್ರಿಗಳನ್ನು ಒದಗಿಸಲಾಗಿದೆ.

ಈ ಉಪಕ್ರಮವು ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣ ಒದಗಿಸುವ ಮಹತ್ವದ ಹೆಜ್ಜೆಯಾಗಿದೆ.

