ಚಿಕ್ಕಮಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಬೀರೂರಿನಲ್ಲಿನ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಮಾಜಿ ಸಚಿವ ಮಾಧುಸ್ವಾಮಿ ಸಂಚರಿಸುತ್ತಿದ್ದ ಕಾರು ಆಟೊ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದಿದೆ. ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಮಾಧುಸ್ವಾಮಿಯವರ ಕಾರು ಗುಜುರಿ ಸಾಗಿಸುತ್ತಿದ್ದ ಆಟೊ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ರಿಕ್ಷಾದಲ್ಲಿದ್ದ ಬಾಣಾವರದ ರಫೀಕ್ ಎಂಬವರು ಗಾಯಗೊಂಡಿದ್ದಾರೆ. ಅವರು ಕಡೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅಪಘಾತದ ಬಳಿಕ ಮಾಧುಸ್ವಾಮಿ ಬೇರೆ ಕಾರಿನಲ್ಲಿ ಕಾರ್ಯಕ್ರಮ ನಡೆಯುವಲ್ಲಿಗೆ ತೆರಳಿದರು.