ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಯುಗಾದಿ ಹಬ್ಬದ ಪ್ರಯುಕ್ತ ರಾಜ್ಯ ಮಟ್ಟದ ಉಚಿತ ಕವನ ಬರೆಯುವ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ತೀರ್ಪುಗಾರರಲ್ಲಿ ಒಬ್ಬರಾದ ಹಿರಿಯ ಸಾಹಿತಿ, ಕವಯತ್ರಿ ಶ್ರೀಮತಿ ಕುಸುಮಾ ಲೋಕೇಶ್ ತಿಳಿಸಿದ್ದಾರೆ.
ಕವನ ಬರೆಯುವ ಆಸಕ್ತರು ಯುಗಾದಿ ಬಗ್ಗೆ ಕವನ ಬರೆದು ತಮ್ಮ ಪೂರ್ಣ ವಿಳಾಸ ವ್ಯಾಟ್ಸಪ್ ಸಂಖ್ಯೆಯೊAದಿಗೆ 7022002518 ಈ ವ್ಯಾಟ್ಸಪ್‌ಗೆ ದಿನಾಂಕ 31-3-2025ರೊಳಗೆ ಕಳಿಸಬೇಕೆಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ.
ಸ್ಪರ್ಧೆಯ ನಿಯಮದಂತೆ ಯಾವುದೇ ಸಭೆ, ಸಮಾರಂಭ ಇಲ್ಲದೇ ಬಹುಮಾನ ವಿಜೇತರ ವ್ಯಾಟ್ಸಪ್‌ಗೆ ಅವರವರ ಫಲಿತಾಂಶ ಅಭಿನಂದನಾ ಪತ್ರ ಕಳಿಸಲಾಗುವುದು. ಹಿರಿಯ, ಕಿರಿಯ, ಕವಿ, ಕವಯತ್ರಿಯರು ಯಾವುದೇ ವಯಸ್ಸಿನ ಮಿತಿ ಇಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಈ ರಾಜ್ಯ ಮಟ್ಟದ ಉಚಿತ ಸ್ಪರ್ಧೆಯಲ್ಲಿ ಭಾಗವಹಿಸಬೇಕಾಗಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ