ಕಲಾಕುಂಚ ಕೇರಳದ ಗಡಿನಾಡಿನ ಶಾಖೆಯಿಂದ ಏ. 13, 14 ರಂದು ಸುಗಮ ಸಂಗೀತ ಕಾರ್ಯಾಗಾರ

0
47

ದಾವಣಗೆರೆ : ದಾವಣಗೆರೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆಯ ಕಲಾಕುಂಚ ಕೇರಳದ ಗಡಿನಾಡಿನ ಶಾಖೆಯ ಆಶ್ರಯದಲ್ಲಿ ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿಯ ಏಕಾಹ ಭಜನಾ ಮಂದಿರದಲ್ಲಿ ಏಪ್ರಿಲ್ 13, 14 ರಂದು ಸೋಮವಾರ, ಮಂಗಳವಾರ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ಸುಗಮ ಸಂಗೀತ ಕಾರ್ಯಾಗಾರ ಮಕ್ಕಳಿಗೆ ಬೇಸಿಗೆ ರಜೆ ಕಾರಣ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಕೇರಳದ ಗಡಿನಾಡಿನ ಶಾಖೆಯ ಸಂಸ್ಥಾಪಕರಾದ ಜಯಲಕ್ಷ್ಮಿ ಕಾರಂತ್ ತಿಳಿಸಿದ್ದಾರೆ.

ಪುತ್ತೂರಿನ ವಿದುಷಿ ಸುಮನಾರಾವ್ ಮತ್ತು ಕುಮಾರಿ ಸುಪ್ರಜಾ ರಾವ್ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಭಕ್ತಿಗೀತೆ, ಭಾವಗೀತೆ, ಜನಪದ ಗೀತೆ, ಚಿತ್ರಗೀತೆ ಮಕ್ಕಳಿಗೆ ಕಲಿಸಿ ಕೊಡುತ್ತಾರೆ. ಈ ಕಾರ್ಯಾಗಾರದಲ್ಲಿ ಭಾಗವಹಿಸಿದ ಮಕ್ಕಳು ಏಕಾಹ ಭಜನಾ ಮಂದಿರದಲ್ಲಿ ನಡೆಯುವ ಶ್ರೀ ಶಾರದೋತ್ಸವದ ಸಾಂಸ್ಕೃತಿಕ ಸಮಾರಂಭದಲ್ಲಿ ಹಾಡುವ ಅವಕಾಶ ಕಲ್ಪಿಸಲಾಗಿದೆ ಎಂದು ಕಲಾಕುಂಚ ನೂತನ ಅಧ್ಯಕ್ಷರಾದ ರಾಧಾಮಣಿ ಮೀಯ ಪದವು ಪ್ರಕಟಿಸಿದ್ದಾರೆ.

ಸಮಾರಂಭದ ಉದ್ಘಾಟನೆಯನ್ನು ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಾಧಾಕೃಷ್ಣತುಂಗ ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯಿನಿ ಶಶಿಕಲ ಜಿ.ಮಯ್ಯ ಆಗಮಿಸಲಿದ್ದಾರೆ. ಈ ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಯವರು ವಿನಂತಿಸಿದ್ದಾರೆ. ಶಿಬಿರದಲ್ಲಿ ಭಾಗವಹಿಸುವ ಮಕ್ಕಳು, ಪೋಷಕರು ಹೆಸರು ನೊಂದಾಯಿಸಲು ಈ ಕೆಳಗಿನ ಸನೀಹವಾಣಿಗಳಿಗೆ ಸಂಪರ್ಕಿಸಬಹುದು 8281283091, 8281948031

LEAVE A REPLY

Please enter your comment!
Please enter your name here