ದಾವಣಗೆರೆ, ನವಂಬರ್,
ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಪ್ರತೀ ವರ್ಷದಂತೆ ಈ ವರ್ಷವೂ 2024-25ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಭಾಗ ವಹಿಸುವ ವಿದ್ಯಾರ್ಥಿ-ವಿದ್ಯಾರ್ಥಿನಿ ಯರಿಗೆ ಪರೀಕ್ಷೆ ಎದುರಿಸುವ, ಧೈರ್ಯ ತುಂಬಲು, ಪೂರ್ವಭಾವಿ ಯಾಗಿ ಮಾನಸಿಕವಾಗಿ ಪೂರ್ಣ ಪ್ರಮಾಣದ ತಯಾರಿಗಾಗಿ ರಾಜ್ಯ ಮಟ್ಟದಲ್ಲಿ ಉಚಿತ ಕಾರ್ಯಾಗಾರ ನಡೆಸುತ್ತಿದ್ದೇವೆ ಎಂದು ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಸೇರಿದಂತೆ ನಾಡಿನ ವಿವಿಧ ಜಿಲ್ಲೆಗಳ ಪ್ರತೀ ಪ್ರೌಢಶಾಲೆಗಳಿಗೆ ಹೋಗಿ ಪರೀಕ್ಷೆಯ ಪೂರ್ವ ಸಿದ್ಧತೆಗಾಗಿ ಉಚಿತ ಕಾರ್ಯಾಗಾರ ನಡೆಸಲು ಶಿಕ್ಷಣ ಸಂಸ್ಥೆಗಳು, ಶೈಕ್ಷಣಿಕ ಕಾಳಜಿಯ ಸಂಘಟನೆಗಳು ಹೆಚ್ಚಿನ ಮಾಹಿತಿಗೆ 9538732777 ಸನೀಹ ವಾಣಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ.