ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ನಗರದ ಸಿದ್ದವೀರಪ್ಪ ಬಡಾವಣೆಯ ಶಾಖೆ ಮತ್ತು ಎಂ.ಸಿ.ಸಿ. `ಎ’ ಬ್ಲಾಕ್ ಶಾಖೆಯ ಸಂಯುಕ್ತಾಶ್ರಯದಲ್ಲಿ “ಮಕ್ಕಳ ದಿನಾಚರಣೆ” ಹಾಗೂ ಕಾರ್ತಿಕೋತ್ಸವ ಸಮಾರಂಭವನ್ನು ನವೆಂಬರ್ 14 ರಂದು ಶುಕ್ರವಾರ ಸಂಜೆ 4 ಗಂಟೆಗೆ ನಗರದ ಕಸ್ತೂರ್ಬಾ ಬಡಾವಣೆಯ ಕುವೆಂಪು ರಸ್ತೆಯಲ್ಲಿರುವ ಕಲಾಕುಂಚ ಕಛೇರಿ ಸಭಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಬಹುಮುಖ ಪ್ರತಿಭೆ, ಯಕ್ಷಗಾನ ಕಲಾವಿದೆ ನಗರದ ಸಂತಪೌಲರ ಬಾಲಕೀಯ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಅಪೇಕ್ಷ ಕೆ.ಯು. ನೆರವೇರಿಸಲಿದ್ದಾಳೆ. ಸಮಾರಂಭದ ಅಧ್ಯಕ್ಷತೆಯನ್ನು ನಗರದ ವಿದ್ಯಾಸಾಗರ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ನಿರಾಲಿ ಲೋಹಿತಾಶ್ವ ವಹಿಸಿಕೊಳ್ಳಲಿದ್ದಾಳೆ. ಮುಖ್ಯ ಅತಿಥಿಗಳಾಗಿ ಅತ್ತಿಗೆರೆ ಗ್ರಾಮದ ಶ್ರೀ ಕೇಸರಿ ಪಬ್ಲಿಕ್ ಪ್ರಾಥಮಿಕ ಶಾಲೆಯ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ವೈಷ್ಣವಿ ಪ್ರಶಾಂತ್, ದಾವಣಗೆರೆಯ ಸೇಂಟ್ ಜಾನ್ಸ್ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಜಿ.ಎಂ. ಚಂದನ್ ನಗರದ ಅನುಭವ ಮಂಟಪದ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರ ಸಮರ್ಥ ಜಿ.ಈ. ಶಾಮನೂರಿನ ಶ್ರೀಮತಿ ಶ್ರೀದೇವಿ ತಿಮ್ಮಾರೆಡ್ಡಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಮಾನ್ಯ ಸಂದೀಪ್ ಶೆಣೈ ಆಗಮಿಸಲಿದ್ದಾರೆ.
ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಅಧ್ಯಕ್ಷರಾದ ಶ್ರೀಮತಿ ಲಲಿತಾ ಕಲ್ಲೇಶ್, ಎಂ.ಸಿ.ಸಿ.ಶಾಖೆಯ ಅಧ್ಯಕ್ಷರಾದ ಶ್ರೀಮತಿ ಪ್ರಭಾ ರವೀಂದ್ರ ವೇದಿಕೆಯಲ್ಲಿ ಗೌರವ ಉಪಸ್ಥಿತರಿರುತ್ತಾರೆ.
ಈ ಮಕ್ಕಳ ದಿನಾಚರಣೆ ಹಾಗೂ ಕಾರ್ತಿಕೋತ್ಸವ ಸಮಾರಂಭಕ್ಕೆ ಮಕ್ಕಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿ ಈ ಮಕ್ಕಳ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.

