ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ 1991ರಲ್ಲಿ ಪ್ರಾರಂಭವಾಗಿ ನಿರಂತರವಾಗಿ ಕಠಿಣ ಪರಿಶ್ರಮದಿಂದ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ವಿಜೃಂಭಣೆಯಿಂದ ನಡೆಸುತ್ತಾ ಬಂದ ಈ ಸಂಸ್ಥೆ ಜನವರಿ 18 ರಂದು ಭಾನುವಾರ ಸಂಜೆ4 ಗಂಟೆಗೆ ಕಲಾಕುಂಚ ಕಛೇರಿಯ ಸಭಾಂಗಣದಲ್ಲಿ 35ನೇ ವರ್ಷದ ವಾರ್ಷಿಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಸಾರ್ವಜನಿಕವಾಗಿ ಅಂದು ಉಚಿತವಾಗಿ ಮಹಿಳೆಯರಿಗೆ ಆರ್ಕಷಕ ‘ಗೃಹಿಣಿ ಸ್ಪರ್ಧೆ” ದಂಪತಿಗಳಿಗೆ ಆಕರ್ಷಕ “ವಧು ವರ ಸ್ಪರ್ಧೆ” ಮಕ್ಕಳಿಗೆ ಆಟೋಟ ಸ್ಪರ್ಧೆ, ರಸ ಪ್ರಶ್ನೆ, ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಗುವುದು.
ಕಲಾಕುಂಚದ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಸರ್ವ ಸದಸ್ಯರ ಮಹಾಸಭೆ ಕರೆಯಲಾಗಿದೆ ಎಂದು ಕಲಾಕುಂಚ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಪ್ರಕಟಿಸಿದ್ದಾರೆ. ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಮಹಾಸಭೆ ಕಲಾಕುಂಚ ಸಂಸ್ಥೆಯ ಸರ್ವ ಸದಸ್ಯರು ಆಗಮಿಸಿ,35ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸರ್ವ ಸದಸ್ಯರ ಮಹಾಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಸಂಸ್ಥೆಯ ಪದಾಧಿಕಾರಿಗಳು ವಿನಂತಿಸಿದ್ದಾರೆ.

