ಕಾಪು : ಕುತ್ಯಾರು–ಪಾದೂರು–ಕಳತ್ತೂರು ಗ್ರಾಮಾಧಿಪತಿ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂತನ ಧ್ವಜಮರ ಸಮರ್ಪಣೆ ಕಾರ್ಯಕ್ರಮವು ಅಕ್ಟೋಬರ್ 30 ರ ಶುಕ್ರವಾರ ನಡೆಯಲಿದೆ.
ಧಾರ್ಮಿಕ ಶ್ರದ್ಧೆ ಹಾಗೂ ಭಕ್ತಿಭಾವದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮದ ಅಂಗವಾಗಿ ಅಂದು ಸಂಜೆ 4 ಗಂಟೆಗೆ ಶಾಂತಿಗುಡ್ಡೆ ಸರ್ಕಲ್ನಿಂದ ವೈಭವದ ಮೆರವಣಿಗೆ ಹೊರಡಲಿದೆ. ಮೆರವಣಿಗೆಯಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಕುತ್ಯಾರು–ಪಾದೂರು–ಕಳತ್ತೂರು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ನೂತನ ಧ್ವಜಮರ ಸಮರ್ಪಣೆಯ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಆಯೋಜಕರು ವಿನಂತಿಸಿದ್ದಾರೆ.

