ಕಲ್ಲಡ್ಕ: ಈಜು ಸ್ಪರ್ಧೆ, ರಾಜ್ಯಮಟ್ಟಕ್ಕೆ ಆಯ್ಕೆ

0
98

ಬಂಟ್ವಾಳ:ಇಲ್ಲಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ 10 ನೇ ತರಗತಿ ವಿದ್ಯಾರ್ಥಿನಿ ಅನರ್ಘ್ಯ ಎ.ಆರ್. ಇವರು ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಭಾಗವಹಿಸಿ 200 ಮೀಟರ್ ಬ್ಯಾಕ್ ಸ್ಟ್ರೋಕ್ ಸಹಿತ 200 ಮೀ. ಮತ್ತು 400 ಮೀ. ವೈಯಕ್ತಿಕ ವಿಭಾಗದಲ್ಲಿ ಚಿನ್ನದ
ಪದಕ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ರೇಷ್ಮೆ ಇಲಾಖೆ ನಿವೃತ್ತ ಇನ್ಸ್ ಪೆಕ್ಟರ್ ಬಿ.ಕೆ. ನಾಯಕ್ ಇವರ ಶಿಷ್ಯರಾಗಿದ್ದು, ಮಂಗಳೂರಿನ ಸೈಂಟ್ ಎಲೋಸಿಯಸ್ ಈಜುಕೊಳದ ಮುಖ್ಯ ತರಬೇತುದಾರರಾದ ಲೋಕರಾಜ್ ವಿಟ್ಲ ಮತ್ತು ವಿನೋದ್ ಕಾರವಾರ ಇವರು ತರಬೇತಿ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here