ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಕಂಬಳ?

0
273

ಬೆಂಗಳೂರು: ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ಶನಿವಾರ ನಡೆಯಿತು.
ಸಭೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮ ನಡೆಸುವ ರೂಪುರೇಶೆಗಳ ಬಗ್ಗೆ ಚರ್ಚೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಹಿತ ಪ್ರಮುಖ ಸಚಿವರು ಭಾಗವಹಿಸಿದ್ದರು.

ಕಂಬಳ ನಡೆಸುವ ಬಗ್ಗೆ ಚರ್ಚೆ: ಸಭೆಯಲ್ಲಿ ದಸರಾ ಸಂದರ್ಭದಲ್ಲಿ ತುಳುನಾಡಿನ ಜನಪದ ಕ್ರೀಡೆ ಕಂಬಳವನ್ನು ನಡೆಸುವ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಮೈಸೂರು ದಸರಾ ವೇಳೆ ಕಂಬಳ ನಡೆಸುತ್ತೀರಾ ಎಂದು ಡಿ ಕೆ ಶಿವಕುಮಾರ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರಲ್ಲಿ ಕೇಳಿದ್ದರು.‌ ಈ ಬಾರಿ‌ದಸರಾದಲ್ಲಿ ಕಂಬಳ ನಡೆಸುವ ಬಗ್ಗೆಯೂ ಚರ್ಚೆ ನಡೆದಿದೆ. ಕಂಬಳಕ್ಕೆ ಅವಕಾಶ ಕಲ್ಪಿಸಿದ್ದೇ ಆದಲ್ಲಿ ಬೆಂಗಳೂರು ಕಂಬಳದ ಮೈಸೂರು ಕಂಬಳ ಎರಡನೇ ಬಾರಿಗೆ ವಿಶ್ವ ವ್ಯಾಪಿ ಪ್ರಚಾರವಾಗಲಿದೆ.

ಈ ಬಗ್ಗೆ ಪುತ್ತೂರು ಶಾಸಕ ಅಶೋಕ್ ರೈ ಮಾಹಿತಿ ನೀಡಿ, ದಸರಾ ವೇಳೆ ಕಂಬಳ ನಡೆಸುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಇನ್ನೂ ಅಂತಿಮವಾಗಿಲ್ಲ. ಬೆಂಗಳೂರು ಬಳಿಕ ಮೈಸೂರಲ್ಲಿ ಕಂಬಳ ನಡೆಸುವ ಇರಾದೆಯೂ ಇದೆ.‌ ಸರಕಾರದಿಂದ ಒಪ್ಪಿಗೆ ಸಿಕ್ಕಿದರೆ ಆ ಬಗ್ಗೆ ಆಲೋಚನೆ ಮಾಡುತ್ತೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here